ಗುಡಿಬಂಡೆ: ಮುಂಗಾರು ಹಂಗಾಮಿನಲ್ಲಿ ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಒಕ್ಕಣೆ ಮತ್ತು ಸಂಸ್ಕರಣೆ ಮಾಡಿಕೊಳ್ಳಲು 8x6 ಅಳತೆಯ ಟಾರ್ಪಲಿನ್‍ಗಳನ್ನು ಪಡೆಯಲು ಸಾಮಾನ್ಯ, ಪ.ಜಾತಿ ಹಾಗೂ ಪ.ಪಂಗಡದ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಕೇಶವರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾರ್ಪಲಿನ್ ಪಡೆಯಲು ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಗಳನ್ನು ನ.7 ರೊಳಗೆ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದೊಳಗೆ ಸಲ್ಲಿಸಿದ ಅರ್ಜಿಗಳನ್ನು ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡವಾರು ವಿಂಗಡಿಸಿ ನಿಗದಿಪಡಿಸಿರುವ ಗುರಿಯನ್ವಯ ಲಾಟರಿ ಮೂಲಕ ಫಲಾನುಭವಿಗಳನ್ನು ಜನಪ್ರತಿನಿಧಿಗಳು ಹಾಗೂ ರೈತರ ಸಮ್ಮುಖದಲ್ಲಿ ಆಯ್ಕೆ ಮಾಡಲಾಗುತ್ತದೆ.
ಲಾಟರಿ ದಿನಾಂಕವನ್ನು ನಿಗದಿತ ಸುದ್ದಿಯ ಮೂಲಕ ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.