ಚಿಂತಾಮಣಿ (ಚಿಕ್ಕಬಳ್ಳಾಪುರ): ರೈತನ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕರ್ನಾಟಕ ರೈತ ಸಂಘದ ತಾಲೂಕು ಅಧ್ಯಕ್ಷ ರಮೇಶ್ ಬಾಬು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೆಂದನಹಳ್ಳಿ ಗ್ರಾಮದ ರೈತರೊಬ್ಬರು, ಕಳೆದ ತಿಂಗಳು ಒಡವೆ ಅಡವಿಟ್ಟು ಬ್ಯಾಂಕ್ನಿಂದ ಸಾಲ ಪಡೆದಿದ್ದಾರೆ. ಇಂದು ಒಡವೆಗಳು ಬಿಡಿಸಲು ಹೋದಾಗ ಬ್ಯಾಂಕಿನ ವ್ಯವಸ್ಥಾಪಕರು, ರೈತನನ್ನ ಏಕವಚನದಲ್ಲಿ ಮಾತನಾಡಿಸಿ ಬ್ಯಾಂಕಿನಿಂದ ಹೊರ ಹಾಕಿದ್ದಾರೆ ಎನ್ನಲಾಗಿದೆ. ಈ ವಿಷಯವ ತಿಳಿದ ರೈತ ಸಂಘದವರು ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ರೈತ ಸಂಘದ ತಾಲೂಕು ಕಾರ್ಯದರ್ಶಿ ಕದಿರೇಗೌಡ ಮಾತನಾಡಿ, ಬ್ಯಾಂಕ್ ವ್ಯವಸ್ಥಾಪಕರು ರೈತರ ಜೊತೆ ಅಸಭ್ಯವಾಗಿ ವರ್ತಿಸಿರುವುದು ಖಂಡನೀಯ. ಹೀಗಾಗಿ ಅವರ ವಿರುದ್ಧ ಪ್ರತಿಭಟಿಸಲಾಗುತ್ತಿದೆ ಎಂದರು.