ಶಿಡ್ಲಘಟ್ಟ (ಚಿಕ್ಕಬಳ್ಳಾಪುರ): ನಗರಸಭೆ ವ್ಯಾಪ್ತಿಯಲ್ಲಿ ಪ್ಯೂಪ ಸಂಸ್ಕರಣಾ ಘಟಕಗಳಿಂದ ಕೆಟ್ಟ ಪರಿಸರ ಉಂಟಾಗಿ ನಾಗರಿಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ ನಡೆಸಿದೆ.
ನಗರಸಭೆ ವ್ಯಾಪ್ತಿಗೆ ಬರುವ ರೇಷ್ಮೆ ಪ್ಯೂಪ ಕಾರ್ಖಾನೆ ಹಾಗೂ ಶೌಚಾಲಯ ನೀರನ್ನು ರಾಜಕಾಲುವೆಗೆ ಬಿಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ಮಾಡಿದರು.
ಸ್ಥಳೀಯರು ಅನಾರೋಗಕ್ಕೆ ತುತ್ತಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸದೇ ಡೆಂಘಿ, ಚಿಕುನ್ ಗುನ್ಯಾ, ಚರ್ಮದ ಕಾಯಿಲೆ, ಶ್ವಾಸಕೋಶದ ತೊಂದರೆ ಹಾಗೂ ಉಸಿರಾಟಕ್ಕೆ ಸಂಬಂಧಪಟ್ಟ ಕಾಯಿಲೆಗಳಿಗೆ ಒಳಗಾಗಿ ಬಳಲುತ್ತಿದ್ದಾರೆ.
ರೈತ ಸಂಘದ ಪದಾಧಿಕಾರಿಗಳು ಹಾಗೂ ನಗರಸಭೆ ಸದಸ್ಯರು ಬಸ್ ನಿಲ್ದಾಣದಿಂದ ನಗರಸಭೆಯವರೆಗೂ ಜಾಥಾ ಮಾಡಲು ಮುಂದಾದಾಗ ಆಯುಕ್ತ ಶ್ರೀನಿವಾಸ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಅವರ ಬೇಡಿಕೆ ಈಡೇರಿಸುವ ಆಶ್ವಾಸನೆ ನೀಡಿದರು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ತಾದೂರು ಮಂಜುನಾಥ್, ನಗರಸಭೆ ಸದಸ್ಯ ರಘು, ರಮೇಶ್, ದೇವರಾಜ್, ಇತರರು ಹಾಜರಿದ್ದರು.
ಇದನ್ನೂ ಓದಿ: ಕೃಷಿ ಕಾಯ್ದೆ ರದ್ದತಿಗೆ ಒತ್ತಾಯಿಸಿ ಕಳಸಾ-ಬಂಡೂರಿ ಹೋರಾಟಗಾರರ ಪ್ರತಿಭಟನೆ