ಚಿಕ್ಕಬಳ್ಳಾಪುರ: ರೈತರ ಮೂಲಭೂತ ಅವಶ್ಯಕತೆ ಸೇರಿದಂತೆ ಎಂಟು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ರೈತರು ಮೊದಲಿನಿಂದಲೂ ಸಂಕಷ್ಟ ಎದುರಿಸುತ್ತಿದ್ದು, ಕೊರೊನಾ ಹಾಗೂ ಲಾಕ್ಡೌನ್ನಿಂದಾಗಿ ಅನ್ನದಾತನ ಪರಿಸ್ಥಿತಿ ಹೇಳತೀರದಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಅವಶ್ಯವಿರುವ ಭೂಮಿ, ನೀರು, ವಿದ್ಯುತ್ ಸೇರಿದಂತೆ ಒಟ್ಟು ಎಂಟು ಬೇಡಿಕೆಗಳನ್ನು ಈಡೇರಿಸುವಂತೆ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ಮಾಡಿದರು.
ರೈತರಿಗೆ ಬೇಕಾದಂತಹ ಮೂಲಭೂತ ಸೌಕರ್ಯಗಳನ್ನು ನೀಡಲು ಸರ್ಕಾರ ವಿಫಲವಾಗಿದ್ದು, ಇದರಿಂದ ಸಾಕಷ್ಟು ತೊಂದರೆಗಳಾಗಿವೆ. ಆದಷ್ಟು ಬೇಗ ಸರ್ಕಾರ ಎಚ್ಚೆತ್ತುಕೊಂಡು ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ರವಾನಿಸಿದರು.