ಬಾಗೇಪಲ್ಲಿ: 5 ಲೋಡ್ ಹುಲ್ಲಿನ ಬಣವೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆಂಧ್ರದ ಗಡಿಭಾಗದಲ್ಲಿ ಇರುವ ಕೊತ್ತಪಲ್ಲಿ ಗ್ರಾಮದಲ್ಲಿ ನಡೆದಿದೆ.
ಸುಟ್ಟು ಕರಕಲಾಗಿರುವ ಹುಲ್ಲಿನ ಬಣವೆ ಗ್ರಾಮದ ನಾರಾಯಣಸ್ವಾಮಿ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಇವರು ಹಸುಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದು, ಸದ್ಯ ಈ ಘಟನೆ ನಡೆದಿದೆ.
ಇನ್ನೂ ತಾಲೂಕಿನ ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ ಸುಮಾರು 2 ಘಂಟೆಗಳಿಗೂ ಹೆಚ್ಚು ಸಮಯವನ್ನು ಅಗ್ನಿಯನ್ನು ನಂದಿಸಲು ಹರಸಾಹಸ ಪಟ್ಟರು.