ಚಿಂತಾಮಣಿ: ರಾಜ್ಯದಲ್ಲಿ ಕೋವಿಡ್-19 ಆರೋಗ್ಯ ತುರ್ತು ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್‌ವಾರು ಟಾಸ್ಕ್ ಫೋರ್ಸ್ ತಂಡಗಳನ್ನು ರಚಿಸಲಾಗಿದ್ದು, ವಾರ್ಡ್‌ಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಚಿಂತಾಮಣಿ ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ 01 ರಿಂದ 31 ರ ವಾರ್ಡಿನ ಜನತೆಗೆ ಮುನ್ನೆಚ್ಚರಿಕಾ ಸಲಹೆಗಳನ್ನು ನೀಡಲು ತಂಡಗಳನ್ನು ರಚಿಸಲಾಗಿದೆ.
ಇಂದು ಟಿಪ್ಪುನಗರದಲ್ಲಿ ಟಾಸ್ಕ್ ಫೋರ್ಸ್ ತಂಡದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ ಕವಚ ಹಾಗೂ ಆಗಾಗ ಕೈಗಳನ್ನು ತೊಳೆಯುವುದು ಸೇರಿದಂತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಿ ಅರಿವು ಮೂಡಿಸಲಾಯಿತು .
ಈ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಅಧ್ಯಕ್ಷ ರಘುನಾಥ್, ನಗರಸಭೆ ಸಿಬ್ಬಂದಿ ಶೇಖ್ ಆರಿಫ್, ಪೊಲೀಸ್ ಸಿಬ್ಬಂದಿ ಬೈರೋಜಿ ರಾವ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಇದ್ದರು.