ಚಿಕ್ಕಬಳ್ಳಾಪುರ: ಕಾಂಗ್ರೆಸ್ನಲ್ಲಿ ಬಿಜೆಪಿ ಪಕ್ಷದ ವಿರುದ್ಧ ಹೋರಾಟ ಮಾಡುವ ಶಕ್ತಿ ಉಳಿದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.
ತಾಲೂಕಿನ ನಂದಿ ಗ್ರಾಮದ ಬೋಗನಂದೀಶ್ವರ ದೇವಾಲಯದಲ್ಲಿ ದೇವರ ದರ್ಶನ ಪಡೆದ ನಂತರ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಸಮರ್ಥ ಅಭ್ಯರ್ಥಿಯನ್ನು ಇಲ್ಲಿ ನಿಲ್ಲಿಸಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸುವ ಉದ್ದೇಶದಿಂದಲೇ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಎಂದರು.
ಎವರಿ ಡೇ ಈಸ್ ನಾಟ್ ಎ ಸಂಡೇ.. ಇದನ್ನು ಅನರ್ಹ ಶಾಸಕ ಸುಧಾಕರ್ ತಿಳಿದುಕೊಳ್ಳಬೇಕು. ಎಲ್ಲಾ ಸಮಯದಲ್ಲೂ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಈ ಬಾರಿ ಹಣದ ಹೊಳೆ ಹರಿಸಿ ಅದರಿಂದ ಗೆಲ್ತೀನಿ ಅಂತಾ ಹೊರಟಿದ್ದಾರೆ. ಹೋದ ವರ್ಷ ಕುಕ್ಕರ್. ಮಿಕ್ಸಿ ಕೊಟ್ಟಿದ್ರು, ಈ ವರ್ಷ ಏನನ್ನು ಕೊಡೋದಕ್ಕೆ ತಯಾರು ಮಾಡಿಕೊಂಡಿದ್ದಾರೋ ಗೊತ್ತಿಲ್ಲ ಎಂದು ಟಾಂಗ್ ಕೊಟ್ಟರು.