ಬಾಗೇಪಲ್ಲಿ : ತಾಲೂಕಿನ ವ್ಯಾಪ್ತಿಯಲ್ಲಿ ನೂತನವಾಗಿ ಘೋಷಣೆಯಾಗಿರುವ ಚೇಳೂರು ತಾಲೂಕು ಅಭಿವೃದ್ಧಿಗೆ ರೂ 200 ಕೋಟಿ ಅನುದಾನ ಬಿಡುಗಡೆ ಮಾಡಬೇಕೆಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎನ್. ಸಂಪಂಗಿ ಸಿಎಂ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರ ಸಲ್ಲಿಸಿ ಮಾತನಾಡಿದ ಮಾಜಿ ಶಾಸಕರು, ಹಿಂದಿನ ಸರ್ಕಾರದಲ್ಲಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚೇಳೂರು ಹೋಬಳಿಯನ್ನು ನೂತನ ತಾಲೂಕನ್ನಾಗಿ ಘೋಷಣೆ ಮಾಡಲಾಗಿತ್ತು. ಆದರೆ ಇದುವರೆಗೂ ಯಾವುದೇ ತಾಲೂಕು ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಂಡಿರುವುದಿಲ್ಲ ಎಂದು ಗುಡುಗಿದರು.
ಚೇಳೂರು ತಾಲೂಕು ಚಟುವಟಿಕೆಗಳನ್ನು ಕೈಗೊಂಡು
ಅಭಿವೃದ್ಧಿಪಡಿಸಲು ಕೂಡಲೇ ರೂ 200.00 ಕೋಟಿ ಬಿಡುಗಡೆ ಮಾಡಬೇಕೆಂದು ಕೋರಿ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಲಾಗಿದೆ. ಮುಖ್ಯಮಂತ್ರಿಗಳು ಇದರ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಚೇಳೂರು ತಾಲೂಕು ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.