ETV Bharat / state

ಹೃದಯಘಾತದಿಂದ ಬಾಗೇಪಲ್ಲಿ ಮಾಜಿ ಶಾಸಕ ಶ್ರೀರಾಮರೆಡ್ಡಿ ನಿಧನ

ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ‌ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು. ಶ್ರೀರಾಮರೆಡ್ಡಿ ನಿಧನಕ್ಕೆ ಬೆಂಬಲಿಗರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಇಂದೇ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ..

former-mla-sriramareddy-died-of-a-heart-attack
ಹೃದಯಘಾತದಿಂದ ಬಾಗೇಪಲ್ಲಿ ಮಾಜಿ ಶಾಸಕ ಶ್ರೀರಾಮರೆಡ್ಡಿ ನಿಧನ
author img

By

Published : Apr 15, 2022, 9:31 AM IST

ಚಿಕ್ಕಬಳ್ಳಾಪುರ : ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಹೃದಯಘಾತದಿಂದ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಮುಂಜಾನೆ 4 ಗಂಟೆಗೆ ಶ್ರೀರಾಮರೆಡ್ಡಿರವರಿಗೆ ತೀವ್ರ ಹೃದಯಘಾತವಾಗಿದ್ದು, ತಕ್ಷಣ ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಆದರೆ, ಚಿಕಿತ್ಸೆ ಫಲಿಸದೆ ಬೆಳಗ್ಗೆ 7.27ರ ವೇಳೆಗೆ ಶ್ರೀರಾಮರೆಡ್ಡಿ ಮೃತಪಟ್ಟಿರುವುದಾಗಿ ತಾಲೂಕು ವೈದ್ಯಧಿಕಾರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ. ರಾಮರೆಡ್ಡಿ ಸಿಪಿಐಎಂ ಪಕ್ಷದಿಂದ ಎರಡು ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.

ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ‌ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು. ಶ್ರೀರಾಮರೆಡ್ಡಿ ನಿಧನಕ್ಕೆ ಬೆಂಬಲಿಗರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಇಂದೇ ಅವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವರುಣನ ಆರ್ಭಟ: ಹಲವು ಮನೆಗಳಿಗೆ ನುಗ್ಗಿದ ನೀರು, ಜನ ಜೀವನ ಅಸ್ತವ್ಯಸ್ತ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.