ಗೌರಿಬಿದನೂರು(ಚಿಕ್ಕಬಳ್ಳಾಪುರ): ಗೌರಿಬಿದನೂರು ತಾಲೂಕು ಡಿ.ಪಾಳ್ಯ ಗ್ರಾಮದ 4 ಮಂದಿ ಹಿಂದೂಪುರಕ್ಕೆ ಹೋಗಿ ಕೊರೊನಾ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು. ಈ ಮಾಹಿತಿ ತಿಳಿದ ಪೊಲೀಸರು 4 ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಿದ್ದರು. ಈ 4 ಮಂದಿಯ ಗಂಟಲು ದ್ರವದ ಪರೀಕ್ಷೆ ಮಾಡಿಸಿದ್ದು ವರದಿ ನೆಗೆಟಿವ್ ಬಂದಿದೆ.
ಲಾಕ್ ಡೌನ್ ಉಲ್ಲಂಘಿಸಿ ನೆರೆಯ ರಾಜ್ಯಕ್ಕೆ ಹೋಗಿ ಬಂದ ಹಿನ್ನೆಲೆಯಲ್ಲಿ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟು 9 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 168, 169, 170 ಅಡಿ ಪ್ರಕರಣ ದಾಖಲಿಸಲಾಗಿದೆ.