ETV Bharat / state

ವಿದ್ಯಾಸಿರಿ ಯೋಜನೆಯಡಿ 70 ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟಾಪ್ ವಿತರಣೆ

ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಸುಮಾರು 70 ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟಾಪ್​ಗಳನ್ನು ಶಾಸಕರಾದ ಶ್ರೀ ಎಸ್. ಎನ್ ಸುಬ್ಬಾರೆಡ್ಡಿಯವರು ವಿತರಣೆ ಮಾಡಿದರು.

Free laptops distributed to 70 poor students under Vidyasiri scheme
70 ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟಾಪ್ ವಿತರಣೆ
author img

By

Published : Mar 15, 2020, 6:34 PM IST

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಸುಮಾರು 70 ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟಾಪ್​ಗಳನ್ನು ಶಾಸಕರಾದ ಶ್ರೀ ಎಸ್. ಎನ್ ಸುಬ್ಬಾರೆಡ್ಡಿಯವರು ವಿತರಣೆ ಮಾಡಿದರು.

70 ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟಾಪ್ ವಿತರಣೆ

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳು ಎಷ್ಟೇ ವಿದ್ಯಾಭ್ಯಾಸ ಮಾಡಿದರೂ ತಾಂತ್ರಿಕ ಜ್ಞಾನ ಅತಿ ಮುಖ್ಯವಾದದ್ದು, ಇದರ ಸಲುವಾಗಿ ಸರ್ಕಾರದ ವತಿಯಿಂದ ವಿದ್ಯಾಸಿರಿ ಯೋಜನೆಯಡಿ ಉಚಿತ ಲ್ಯಾಪ್​ಟಾಪ್​ಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದನ್ನು ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಸದುಪಯೋಗಪಡಿಸಿಕೊಳ್ಳಿ ಮಾನ್ಯ ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಎಸ್.ಎನ್.ಸುಬ್ಬಾರೆಡ್ಡಿ, ಕೆ.ಡಿ.ಪಿ ಸದಸ್ಯರಾದ ಅಮರನಾಥ್ ರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ (ಬುರುಗಮಡುಗು) ನರಸಿಂಹಪ್ಪ, ನರೇಂದ್ರ ಬಾಬು ತಾಲೂಕು ಪಂಚಾಯಿತಿ ಅಧ್ಯಕ್ಷರು, ಪಿ.ಎಲ್.ಡಿ. ಬ್ಯಾಂಕ್ ಉಪಾಧ್ಯಕ್ಷ ಪ್ರಭಾಕರ್ ರೆಡ್ಡಿ, ಪ್ರಾಧ್ಯಾಪಕರಾದ ಡಾ. ನಯಾಜ್, ಬಾಗೇಪಲ್ಲಿ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.