ETV Bharat / state

ನೀರಾವರಿ ಯೋಜನೆಗಳ ಅನುಷ್ಟಾನದಲ್ಲಿ ಸರ್ಕಾರ ವಿಫಲ: ಕೋಡಿಹಳ್ಳಿ ಚಂದ್ರಶೇಖರ್

ನೀರಾವರಿ ಯೋಜನೆಗಳ ಅನುಷ್ಟಾನದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಉತ್ತರ ಕರ್ನಾಟಕದಲ್ಲಿ ನೆರೆ ಬಂದಾಗ ಸಾಂತ್ವನವನ್ನೂ ಕೂಡಾ ಯಾರೂ ಹೇಳಲಿಲ್ಲ. ಸರ್ಕಾರದ ಪರವಾಗಿ ಪರಿಹಾರ ಕೇಳಲು ಸಂಸದರು, ಶಾಸಕರು ವಿಫಲರಾಗಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ದೂರಿದ್ರು.

ಚಿಂತಾಮಣಿ ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿಯಲ್ಲಿ ನಡೆದ ರೈತ ಸಮಾವೇಶದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿದರು.
author img

By

Published : Oct 18, 2019, 9:18 AM IST

ಚಿಕ್ಕಬಳ್ಳಾಪುರ: ಬಯಲುಸೀಮೆ ಜಿಲ್ಲೆಗಳಿಗೆ ವಿವಿಧ ಯೋಜನೆಗಳಲ್ಲಿ ನೀರು ಹರಿಸುವಲ್ಲಿ ಆ ಭಾಗದ ಶಾಸಕರು, ಸಂಸದರಿಗೆ ಕಾಳಜಿ ಇಲ್ಲ. ರೈತ ಸಂಘಗಳು ಹಲವು ಬಾರಿ ಪ್ರತಿಭಟನೆ ನಡೆಸಿ ಯೋಜನೆಗಳು ಮಂಜೂರಾದರೂ, ಅನುಷ್ಟಾನಗೊಳಿಸುವಲ್ಲಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳಿಂದ ವೈಫಲ್ಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದಾರೆ.

ಚಿಂತಾಮಣಿ ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿಯಲ್ಲಿ ನಡೆದ ರೈತ ಸಮಾವೇಶದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿದರು.

ಚಿಂತಾಮಣಿ ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿಯಲ್ಲಿ ನಡೆದ ರೈತ ಸಮಾವೇಶದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ಬಗ್ಗೆ ಕಿಡಿಕಾರಿದ್ದಾರೆ.

ರೈತರು ನೂರಾರು ದ್ವಿಚಕ್ರ ವಾಹನಗಳು, ಟ್ರಾಕ್ಟರ್‌ಗಳೊಂದಿಗೆ ಬೆಂಗಳೂರಿಗೆ ಜಾಥಾ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸಿ ಸರ್ಕಾರದ ಮೇಲೆ ಒತ್ತಡ ಹಾಕಿದ್ದು, ಯೋಜನೆಗಳನ್ನು ಮಂಜೂರು ಮಾಡಿಸಲಾಗಿದೆ. ಆದರೆ ಚುನಾಯಿತ ಪ್ರತಿನಿಧಿಗಳು ತಾವು ಕೆಲಸ ಮಾಡಿಸಿದ್ದೇವೆ ಎಂದು ಹೇಳಿಕೊಂಡು ಜನರನ್ನು ಮರುಳು ಮಾಡಿ ಮತ ಪಡೆಯುತ್ತಾರೆ ಎಂದು ಟೀಕಿಸಿದರು.

ಉತ್ತರ ಕರ್ನಾಟಕಕ್ಕೆ ನೆರೆ ಪರಿಹಾರ ಒದಗಿಸುವಲ್ಲಿ ಕರ್ನಾಟಕ ಸರ್ಕಾರ ಮತ್ತು ಸಂಸದರು ಸಂಪೂರ್ಣ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ, 3 ಜನ ಉಪ ಮುಖ್ಯಮಂತ್ರಿಗಳಿದ್ದಾರೆ. ಹೀಗಿದ್ದರೂ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ ಸಮಸ್ಯೆಯನ್ನು ಮನವರಿಕೆ ಮಾಡಿಕೊಡುವ ಶಕ್ತಿ ಒಬ್ಬರಿಗೂ ಇಲ್ಲ. ಪ್ರಧಾನ ಮಂತ್ರಿ ರಾಜ್ಯಕ್ಕೆ ಭೇಟಿ ನೀಡಿದಾಗ, ನೆರೆ ಪರಿಹಾರದ ಕುರಿತು ಜನರಿಗೆ ಸಾಂತ್ವನ ಹೇಳುವ ವ್ಯವಧಾನವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಸೀಕಲ್ ರಮಣಾರೆಡ್ಡಿ ಮಾತನಾಡಿ, ಕ್ಷೇತ್ರದಲ್ಲಿ ರಸ್ತೆಗಳನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಸುತ್ತಮುತ್ತಲ ಗ್ರಾಮಸ್ಥರು ಸೇರಿ ಸೀಕಲ್ ಕ್ರಾಸ್‌ನಲ್ಲಿ ರಸ್ತೆ ತಡೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Intro:ಬಯಲುಸೀಮೆ ಜಿಲ್ಲೆಗಳಿಗೆ ವಿವಿಧ ಯೋಜನೆಗಳಲ್ಲಿ ನೀರು ಹರಿಸುವಲ್ಲಿ ಆ ಭಾಗದ ಶಾಸಕರು, ಸಂಸದರಿಗೆ ಕಾಳಜಿ ಇಲ್ಲ. ರೈತ ಸಂಘಗಳು ಹಲವಾರು ಬಾರಿ ಪ್ರತಿಭಟನೆ ನಡೆಸಿ ಯೋಜನೆಗಳನ್ನು ಮಂಜೂರಾದರೂ, ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳಿಂದ ವೈಫಲ್ಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆರೋಪಿಸಿದ್ದಾರೆ.Body:ಚಿಂತಾಮಣಿ ತಾಲ್ಲೂಕಿನ ದೊಡ್ಡಬೊಮ್ಮನಹಳ್ಳಿ
ಯಲ್ಲಿ ನಡೆದ ರೈತ ಸಮಾವೇಶದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ಬಗ್ಗೆ ಕಿಡಿಕಾರಿದ್ದಾರೆ.

ರೈತರು ನೂರಾರು ದ್ವಿಚಕ್ರ ವಾಹನಗಳು, ಟ್ರಾಕ್ಟರ್‌ಗಳೊಂದಿಗೆ ಬೆಂಗಳೂರಿಗೆ ಜಾಥಾ ಸೇರಿದಂತೆ ಅನೇಕ ಬಾರಿ ಹಲವಾರು ರೀತಿಯಲ್ಲಿ ಹೋರಾಟ ನಡೆಸಿ ಸರ್ಕಾರದ ಮೇಲೆ ಒತ್ತಡ ಹಾಕಿ ಯೋಜನೆಗಳನ್ನು ಮಂಜೂರು ಮಾಡಿಸಲಾಗಿದೆ. ಆದರೆ ಚುನಾಯಿತ ಪ್ರತಿನಿಧಿಗಳು ತಾವು ಮಾಡಿಸಿದ್ದೇವೆ ಎಂದು ಹೇಳಿಕೊಂಡು ಜನರನ್ನು ಮರುಳು ಮಾಡಿ ಮತ ಪಡೆಯುತ್ತಾರೆ ಎಂದು ಟೀಕಿಸಿದರು.

ಉತ್ತರ ಕರ್ನಾಟಕದ ನೆರೆ ಪರಿಹಾರ ಒದಗಿಸುವಲ್ಲಿ ಕರ್ನಾಟಕ ಸರ್ಕಾರ ಮತ್ತು ಸಂಸದರು ಸಂಪೂರ್ಣ ವಿಫಲರಾಗಿದ್ದಾರೆ. ಮುಖ್ಯಮಂತ್ರಿಗಳು, 3 ಜನ ಉಪ ಮುಖ್ಯಮಂತ್ರಿಗಳು ಒಬ್ಬರಾದರೂ ಕೇಂದ್ರದಿಂದ ಪರಿಹಾರ ಕೇಳುವ ಧೈರ್ಯ ಇಲ್ಲ. ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ ಸಮಸ್ಯೆಯನ್ನು ಮನವರಿಕೆ ಮಾಡಿಕೊಡುವ ಶಕ್ತಿ ಒಬ್ಬರಿಗೂ ಇಲ್ಲ. ಪ್ರಧಾನ ಮಂತ್ರಿ ರಾಜ್ಯಕ್ಕೆ ಭೇಟಿ ನೀಡಿದಾಗ, ನೆರೆ ಪರಿಹಾರದ ಕುರಿತು ಜನರಿಗೆ 2 ಮಾತು ಹೇಳುವ ವ್ಯವಧಾನವಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ರಾಜ್ಯದ ನೆರೆ ಮತ್ತು ಬರವನ್ನು ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಚಂದ್ರಶೇಖರ್ ಆರೋಪಿಸಿದರು.
ತಾಲ್ಲೂಕು ಘಟಕದ ಅಧ್ಯಕ್ಷ ಸೀಕಲ್ ರಮಣಾರೆಡ್ಡಿ ಮಾತನಾಡಿ, ಕ್ಷೇತ್ರದಲ್ಲಿ ರಸ್ತೆಗಳನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಸುತ್ತಮುತ್ತಲ ಗ್ರಾಮಸ್ಥರು ಸೇರಿ ಸೀಕಲ್ ಕ್ರಾಸ್‌ನಲ್ಲಿ ರಸ್ತೆ ತಡೆ ನಡೆಸುವುದಾಗಿ ಇದೇ ವೇಳೆ ಎಚ್ಚರಿಕೆಯನ್ನು ನೀಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.