ಚಿಕ್ಕಬಳ್ಳಾಪುರ : ಆರ್ಥಿಕ ಬಿಕ್ಕಟ್ಟಿನ ಮಧ್ಯೆಯೂ ಕೇಂದ್ರ ಸರ್ಕಾರ ಉತ್ತಮ ಬಜೆಟ್ ಮಂಡಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಕೇಂದ್ರ ಬಜೆಟ್ ಕುರಿತಂತೆ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಈ ಬಾರಿದೂರಗಾಮಿ ಐತಿಹಾಸಿಕ ಆಯವ್ಯಯ ಮಂಡಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೃಷಿ ಕಾಯ್ದೆಗಳ ತಿದ್ದುಪಡಿಯಲ್ಲಿ ಲೋಪದೋಷಗಳಿಲ್ಲ. ಆದರೂ ಕೆಲವು ರೈತ ಮುಖಂಡರು ದೆಹಲಿಯಲ್ಲಿ ಧರಣಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎಪಿಎಂಸಿಗಳ ಬಲವರ್ಧನೆಗೆ ಬಜೆಟ್ನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಕಾಯ್ದೆಗಳು ರೈತ ವಿರೋಧಿಯಾಗಿಲ್ಲ. ಕೆಲವರು ಆಂದೋಲನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ನಕಲಿ ಹೋರಾಟಗಾರರನ್ನು ಹತ್ತಿಕ್ಕುವ ಕೆಲಸವಾಗಬೇಕಿದೆ ಎಂದರು.