ETV Bharat / state

ಪ್ರವಾಹ ಪೀಡಿತ ಪ್ರದೇಶಗಳ ನಿರ್ಲಕ್ಷ್ಯ: ರೈತ ಸಂಘದಿಂದ ಅ.10 ರಂದು ವಿಧಾನಸೌಧಕ್ಕೆ ಮುತ್ತಿಗೆ - ಚಿಕ್ಕಬಳ್ಳಾಪುರ ಸುದ್ದಿಗಳು

ಚಿಂತಾಮಣಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ, ರಾಜ್ಯದಲ್ಲಾಗಿರುವ ಪ್ರವಾಹದ ಬಗ್ಗೆ ಕೇಂದ್ರ ಸರ್ಕಾರ ಸ್ವಲ್ಪವೂ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರವಾಹ ಪೀಡಿತ ಪ್ರದೇಶಗಳ ನಿರ್ಲಕ್ಷ್ಯ: ರೈತ ಸಂಘದಿಂದ ಅ.10 ರಂದು ವಿಧಾನಸೌಧಕ್ಕೆ ಮುತ್ತಿಗೆ
author img

By

Published : Oct 8, 2019, 5:01 AM IST

ಚಿಕ್ಕಬಳ್ಳಾಪುರ/ಚಿಂತಾಮಣಿ : ರಾಜ್ಯದ ಮಲೆನಾಡು ಪ್ರದೇಶದಲ್ಲಿ ಮಳೆ ಪ್ರವಾಹವಾಗಿ ರೈತರು ಮನೆ ಭೂಮಿ ಕಳೆದುಕೊಂಡು ಅನಾಥರಾಗಿದ್ದಾರೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಈ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದೆ ವರ್ತಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಪ್ರವಾಹ ಪೀಡಿತ ಪ್ರದೇಶಗಳ ನಿರ್ಲಕ್ಷ್ಯ: ರೈತ ಸಂಘದಿಂದ ಅ.10 ರಂದು ವಿಧಾನಸೌಧಕ್ಕೆ ಮುತ್ತಿಗೆ

ಎರಡು ತಿಂಗಳ ಹಿಂದೆ ಉತ್ತರ ಕರ್ನಾಟಕದಲ್ಲಿ ಭೀಕರ ಮಳೆ ಮತ್ತು ಪ್ರವಾಹದಿಂದ ದುರಂತ ಸಂಭವಿಸಿದೆ. ಅಲ್ಲಿನ ಜನರ ಸಮಸ್ಯೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿರ್ಲಕ್ಷ್ಯ ವಹಿಸಿದ್ದಾರೆ. ಒಂದು ಲಕ್ಷ ಕೋಟಿಯಷ್ಟು ಬೆಲೆಬಾಳುವ ಭೂಮಿ, ಮನೆ ಕಳೆದುಕೊಂಡು ರೈತರು ಬೀದಿ ಪಾಲಾಗಿದ್ದಾರೆ. ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಹೀಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅಕ್ಟೋಬರ್ 10 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.

ನೆರೆ ಸಂತ್ರಸ್ತರ ಪುನರ್ವಸತಿ ಮತ್ತು ಪರಿಹಾರಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಕೇವಲ 1200 ಕೋಟಿ ರೂ.ಗಳನ್ನು ನೀಡಿದೆ. ಈ ಹಣದಿಂದ ನೇರ ಸಂತ್ರಸ್ತರ ಬದುಕು ಕಟ್ಟಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು, ಉತ್ತರ ಕರ್ನಾಟಕ ಹಾಗೂ ಬಯಲು ಸೀಮೆ ಜಿಲ್ಲೆಯ ರೈತರ ಹಲವಾರು ಸಮಸ್ಯೆಗಳಿಗೆ ಪರಿಹಾರ ರೂಪಿಸುವಂತೆ ಒತ್ತಾಯಿಸಿದರು.

ಬ್ಯಾಂಕಿನಲ್ಲಿ ಶೇಖರಿಸಿ ಕೂಡಿಟ್ಟಿದ್ದ 1.46 ಲಕ್ಷ ಕೋಟಿ ಬಜೆಟ್​ಗೆ ಮೀಸಲಿಟ್ಟಿದ್ದ ತೆರಿಗೆ ಹಣವನ್ನು ಕೇಂದ್ರ ಬಿಜೆಪಿ ಸರಕಾರ ಡ್ರಾ ಮಾಡಿ ಖಾಸಗಿ ಕಂಪನಿಗಳಿಗೆ ಕೊಟ್ಟಿದೆ. ದೇಶಕ್ಕೆ ಅನ್ನ ಬಟ್ಟೆ ಒದಗಿಸುವ ರೈತರನ್ನು ನಿರ್ಲಕ್ಷಿಸಿದೆ. ರೈತರ ಒಂದು ಲಕ್ಷ ರೂ. ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಏಕೆ ಪ್ರಸ್ತಾಪಿಸುತ್ತಿಲ್ಲ ಎಂದು ಪ್ರಶ್ನಿಸಿದರು.

Intro:
ಚಿಂತಾಮಣಿ :ಮಲೆನಾಡು ಪ್ರದೇಶದಲ್ಲಿ ಮಳೆ ಪ್ರವಾಹವಾಗಿ ರೈತರು ಮನೆ ಭೂಮಿ ಕಳೆದುಕೊಂಡು ಅನಾಥರಾಗಿದ್ದು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇಲ್ಲದೆ ವರ್ತಿಸುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಭೈರೇಗೌಡ ಕಿಡಿಕಾರಿದರು.Body:ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು ಎರಡು ತಿಂಗಳ ಹಿಂದೆ ಉತ್ತರ ಕರ್ನಾಟಕದಲ್ಲಿ ಭೀಕರ ಮಳೆ ಮತ್ತು ಪ್ರವಾಹದಿಂದ ದುರಂತ ಸಂಭವಿಸಿದೆ ಅಲ್ಲಿನ ಜನರ ಸಮಸ್ಯೆ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು .

ಒಂದು ಲಕ್ಷ ಕೋಟಿಯಷ್ಟು ಬೆಲೆಬಾಳುವ ಭೂಮಿ ಮನೆ ಕಳೆದುಕೊಂಡು ರೈತರು ಬೀದಿ ಪಾಲಾಗಿದ್ದಾರೆ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ಅಕ್ಟೋಬರ್ 10 ರಂದು ಬೆಂಗಳೂರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು.

ನೆರೆ ಸಂತ್ರಸ್ತರ ಪುನರ್ವಸತಿ ಮತ್ತು ಪರಿಹಾರಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಕೇವಲ 1.200 ಕೋಟಿ ರೂಗಳನ್ನು ನೀಡಿದೆ ಈ ಹಣದಿಂದ ನೇರ ಸಂತ್ರಸ್ತರ ಬದುಕು ಕಟ್ಟಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು ಉತ್ತರ ಕರ್ನಾಟಕ ಹಾಗೂ ಬಯಲು ಸೀಮೆ ಜಿಲ್ಲೆಯ ರೈತರ ಹಲವಾರು ಸಮಸ್ಯೆಗಳಿಗೆ ಪರಿಹಾರ ರೂಪಿಸುವಂತೆ ಒತ್ತಾಯಿಸಿದರು.

ಬ್ಯಾಂಕಿನಲ್ಲಿ ಶೇಖರಿಸಿ ಕೂಡಿಟ್ಟಿದ್ದ 1.46 ಲಕ್ಷ ಕೋಟಿ ಬಜೆಟ್ ನ ಮೀಸಲಿಟ್ಟಿದ್ದ ತೆರಿಗೆ ಹಣವನ್ನು ಕೇಂದ್ರ ಬಿಜೆಪಿ ಸರಕಾರ ಡ್ರಾ ಮಾಡಿ ಖಾಸಗಿ ಕಂಪನಿಗಳಿಗೆ ಕೊಟ್ಟಿದೆ .ದೇಶಕ್ಕೆ ಅನ್ನ ಬಟ್ಟೆ ಒದಗಿಸುವ ರೈತರನ್ನು ನಿರ್ಲಕ್ಷಿಸಿದೆ ರೈತರ ಒಂದು ಲಕ್ಷ ರೂ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಏಕೆ ಪ್ರಸ್ತಾಪಿಸುತ್ತಿಲ್ಲ ಎಂದು ಪ್ರಶ್ನಿಸಿದರು .Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.