ETV Bharat / state

ಸಿದ್ದರಾಮಯ್ಯ ಮಾಡಿದ ಭ್ರಷ್ಟಾಚಾರ ಮುಚ್ಚಿ ಹಾಕಲು ನಮ್ಮ ಸರ್ಕಾರ ಶ್ರಮಿಸುತ್ತಿದೆ.. ಶ್ರೀರಾಮುಲು

author img

By

Published : Aug 26, 2022, 9:12 AM IST

Updated : Aug 26, 2022, 1:09 PM IST

ನಿಮ್ಮ ಹತ್ತಿರ ಸರ್ಕಾರ, ಮಂತ್ರಿಗಳ ಭ್ರಷ್ಟಾಚಾರದ ಬಗ್ಗೆ ದಾಖಲೆ ಇದ್ದರೆ ಬಹಿರಂಗಪಡಿಸಿ ಕೇವಲ ಸರ್ಕಾರಗಳ ಮೇಲೆ ಮಂತ್ರಿಗಳ ಮೇಲೆ ಆರೋಪ ಮಾಡುವುದು ಶೋಭೆ ತರುವುದಿಲ್ಲ ಎಂದು ಶ್ರೀರಾಮುಲು ಒತ್ತಾಯಿಸಿದ್ದಾರೆ.

Minister ShriRamulu
ಸಚಿವ ಶ್ರೀರಾಮುಲು

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರನ ಮನೆಯಲ್ಲಿ ಹುಟ್ಟಿದ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಆದರೆ, ಅವರ ಅವಧಿಯ ಸರ್ಕಾರದಲ್ಲಿ ರಾಜ್ಯವನ್ನು ಸಂಪೂರ್ಣ ಲೂಟಿ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಅವಧಿಯಲ್ಲಿ ನಡೆದ ಭ್ರಷ್ಟಚಾರಗಳನ್ನು ತೇಪೆ ಹಚ್ಚುವ ಕೆಲಸವನ್ನು ನಮ್ಮ‌ ಸರ್ಕಾರ ಮಾಡುತ್ತಿದೆ ಎಂದು ಸಾರಿಗೆ ಸಚಿವ ಶ್ರೀರಾಮಲು ಜಿಲ್ಲೆಯ ಗೌರಿಬಿದನೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ತಾಲೂಕಿನ ಮಲ್ಲಸಂದ್ರದಲ್ಲಿ ವಸತಿ ನಿಲಯ ಉದ್ಘಾಟನೆ ಕಾರ್ಯಕ್ರಮಕ್ಕೆ ಭೇಟಿ‌ ನೀಡಿದ‌ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು ರಾಕ್ಷಸರ ಹಾಗೂ ದೆವ್ವಗಳ ಬಾಯಲ್ಲಿ ಭಗವದ್ಗೀತೆ ಎಂಬಂತೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. ಇವರೆಲ್ಲರೂ ಸತ್ಯ ಹರಿಶ್ಚಂದ್ರರಾ ಎಂದು ಪ್ರಶ್ನಿಸಿದರು.

ಸರ್ಕಾರದ ವಿರುದ್ಧ ಕೆಲವು ಗುತ್ತಿಗೆದಾರರು ಆರೋಪ ಮಾಡುತ್ತಿದ್ದಾರೆ. ಎಲ್ಲ ಗುತ್ತಿಗೆದಾರರಿಗೆ ನಾನು ವಿನಂತಿ ಮಾಡುತ್ತೇನೆ. ನೀವು ನಿಮ್ಮ ಸ್ವಯಂ ಪ್ರೇರಣೆಯ ಹೇಳಿಕೆ ನೀಡುತ್ತಿದ್ದೀರಾ ಅಥವಾ ಯಾರದೋ ಪ್ರಚೋದನೆಯಿಂದ ಹೇಳಿದ್ದೀರಾ ಅಂತ ಕೇಳಬೇಕಾಗುತ್ತದೆ. ನಿಮ್ಮ ಹತ್ತಿರ ಸರ್ಕಾರ, ಮಂತ್ರಿಗಳ ಭ್ರಷ್ಟಾಚಾರದ ಬಗ್ಗೆ ದಾಖಲೆ ಇದ್ದರೆ ಬಹಿರಂಗಪಡಿಸಿ.

ಸಚಿವ ಶ್ರೀರಾಮುಲು

ಕೇವಲ ಸರ್ಕಾರಗಳ ಮೇಲೆ ಮಂತ್ರಿಗಳ ಮೇಲೆ ಆರೋಪ ಮಾಡುವುದು ಶೋಭೆ ತರುವುದಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಇದನೆಲ್ಲ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಯಾರೋ ಹೇಳಿಕೊಟ್ಟಿದ್ದಾರೆ. ಇದರ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಆರೋಪ ಮಡಿರುವ ಇಂತಹವರ ಬಗ್ಗೆ ಮುಂದಿನ ದಿನಗಳಲ್ಲಿ ವಿಚಾರ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸರ್ಕಾರದ ವಿರುದ್ಧ ಶೇ 40 ಕಮಿಷನ್ ಆರೋಪ ವಿಚಾರಕ್ಕೆ ಉತ್ತರಿಸಿದ್ದು, ಕಾಂಗ್ರೆಸ್​ನಿಂದ ಪ್ರಚೋದನೆ ಪಡೆದು ಅವರು ಆರೋಪ ಮಾಡುತ್ತಿದ್ದಾರೆ. ಅದೆಲ್ಲ ನಿಜವಾದರೆ ಸಾಕ್ಷಿ ಕೊಟ್ಟು ಮಾತನಾಡಲಿ. ಕಳೆದ ಬಾರಿ ಕೂಡ ಹೇಳಿದ್ದೇನೆ. ಆರೋಪ ಮಾಡುವುದರಿಂದ ಏನು ಸಿಗುತ್ತದೆ. ದಾಖಲೆಗಳ ಬಿಡುಗಡೆ ಮಾಡಲಿ. ಈ ರೀತಿ ಆರೋಪ ಮಾಡಿ ಕಾಂಗ್ರೆಸ್​ನವರಿಗೆ ಲಾಭ ಮಾಡಿಕೊಡಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಇದು ಯಾರಿಗೂ ಶೋಭೆ ತರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ : ಗುತ್ತಿಗೆದಾರರ ಸಂಘದ ಮೇಲೆ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವೆ: ಸಚಿವ ಮುನಿರತ್ನ

Last Updated : Aug 26, 2022, 1:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.