ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯತ್ ಚುನಾವಣೆ ನಡೆಯುತ್ತಿದೆ.
ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅಬ್ಬರಿಸುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಸಹ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಳದ ಜತೆಗೆ ಸಾಕಷ್ಟು ಸಾವು ನೋವು ಸಂಭವಿಸುತ್ತಿದೆ. ನಿನ್ನೆ ರಾಜ್ಯ ಸರ್ಕಾರ ಟಫ್ ರೂಲ್ಸ್ಗಳನ್ನು ಜಾರಿಗೆ ತಂದಿದೆ. ಇದರ ನಡುವೆ ಸ್ಥಳೀಯ ಗುಡಿಬಂಡೆ ಪಟ್ಟಣ ಪಂಚಾಯತ್ ಚುನಾವಣೆ ನಡೆಯುತ್ತಿದೆ.
ಇದನ್ನೂ ಓದಿ: ಭದ್ರಾವತಿ, ತೀರ್ಥಹಳ್ಳಿ ಸ್ಥಳೀಯ ಸಂಸ್ಥೆಗಳ ಚುನಾವಣೆ: ಇಂದು ಮತದಾನ
ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಚುನಾವಣೆ ಜರುಗಲಿದೆ. ಪಟ್ಟಣ ಪಂಚಾಯತ್ನ ಒಟ್ಟು 11 ವಾರ್ಡ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 8,814 ಮತದಾರರು ಮತ ಚಲಾಯಿಸಲಿದ್ದಾರೆ. 11 ಸ್ಥಾನಗಳಿಗೆ 50 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.