ಚಿಕ್ಕಬಳ್ಳಾಪುರ: ಬಿಜೆಪಿಯವರು ಹಣದಿಂದ ಏನು ಬೇಕಾದರೂ ಕೊಂಡುಕೊಳ್ಳಬಹುದು ಎಂದುಕೊಂಡಿದ್ದಾರೆ. ಈ ಹಿಂದೆ ಮೈತ್ರಿ ಸರ್ಕಾರದ ಅವಧಿಯಲ್ಲಿ 18 ಶಾಸಕರನ್ನು ಖರೀದಿಸಿ ಕುತಂತ್ರದ ರಾಜಕಾರಣ ಮಾಡಿದ್ದರು. ಈ ಮೂಲಕ ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯ ಪರ ಅವರು ಮತಯಾಚನೆ ಮಾಡಿದರು. ಈ ಚುನಾವಣೆಗೆ ಜಿಲ್ಲಾ ಮಂತ್ರಿಗಳು ಅವರ ಅಭಿವೃದ್ಧಿಯ ಹೆಸರಿನಲ್ಲಿ ಮತ ಕೇಳುತ್ತಿಲ್ಲ. ಬಿಜೆಪಿಯವರು ಹಣದಲ್ಲಿ ಏನನ್ನಾದರೂ ಸಾಧಿಸಬಹುದು ಎಂದು ತಿಳಿದುಕೊಂಡಿದ್ದಾರೆ. ರಾಜಾರೋಷವಾಗಿ ಎಲ್ಲವೂ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಾವು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದು ದುಸ್ಸಾಹಸವಾಗಿದೆ ಎಂದು ಹೇಳಿದರು.
2023ಕ್ಕೆ ಜೆಡಿಎಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಬೇಕಿದೆ. ಶಿಕ್ಷಣ, ಆರೋಗ್ಯದ ಕಡೆ ನಾವು ಹೆಚ್ಚು ಒತ್ತು ನೀಡಲಿದ್ದೇವೆ ಎಂದು ಹೆಚ್ಡಿಕೆ ಭರವಸೆ ನೀಡಿದರು.
ಇದನ್ನೂ ಓದಿ: ಬಿಡಿಎ ಕಚೇರಿಗಳ ಮೇಲೆ ಎಸಿಬಿ ದಾಳಿ : ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು