ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ನಿರ್ಧರಿಸಿದ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುವುದಾಗಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಅನಿರ್ದಿಷ್ಟಾವಧಿ ಅರೆಬೆತ್ತಲೆ ಪ್ರತಿಭಟನೆ ನಡೆಯಿತು.
ಅಂಬೇಡ್ಕರ್ ಭವನ ನಿರ್ಮಾಣ ಮಾಡುವ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಹಾಗೂ ತಾಲೂಕು ಪಂಚಾಯಿತಿ ಆಡಳಿತ ಕಚೇರಿ ನಿರ್ಮಾಣ ಮಾಡುವುದಾಗಿ ಹೇಳಿಕೆ ನೀಡಿ ಗೊಂದಲ ಉಂಟು ಮಾಡುತ್ತಿದ್ದಾರೆ. ಸುಮಾರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಅಧಿಕಾರಿಗಳಿಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಾಗೇಪಲ್ಲಿ ಮುಖ್ಯ ರಸ್ತೆಗಳಲ್ಲಿ ಅರೆಬೆತ್ತಲೆ ಮೆರೆವಣಿಗೆ ಮೂಲಕ ವಿವಿಧ ಸಂಘಗಳು ಸೇರಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.