ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ತಾಯಿಯೋರ್ವಳು ತನ್ನ ಮಗನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನವಲತ (26) ಹಾಗೂ ಮಗ ಅಂಜನ್ ಕುಮಾರ್ (6) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಕಳೆದ ದಿನ ಸಂಜೆ ತಾಯಿ ಹಾಗೂ ಮಗ ಇಬ್ಬರು ಗ್ರಾಮದ ತೋಟದ ಮನೆಗೆ ಹೋಗಿದ್ದು, ವಾಪಸ್ ಮನೆಗೆ ಬಾರದ ಕಾರಣ ಪರಿಶೀಲನೆ ನಡೆಸಲಾಗಿದ್ದು ಸಂಪಿನಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪೋಷಕರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ, ಹಾಳು ಮಾಡಬೇಡಿ: ಹೆಚ್.ಡಿ.ಕುಮಾರಸ್ವಾಮಿ
ಗಂಡ ಸೊಣ್ಣೇಗೌಡ ತಂದೆ ರಾಮಣ್ಣ ಹಾಗೂ ತಾಯಿ ಪಿಳ್ಳಮ್ಮ ಸೇರಿದಂತೆ ಇತರರ ವಿರುದ್ಧ ಪೋಷಕರು ದೂರು ಸಲ್ಲಿಸಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ತಮ್ಮ ಮಗಳು ಸಾವನ್ನಪ್ಪಿರುವುದಾಗಿ ದೂರು ದಾಖಲಿಸಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.