ಬಾಗೇಪಲ್ಲಿ: ವಿಧಾನ ಪರಿಷತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕೊರೊನಾ ವೈರಸ್ ನಡುವೆಯೂ ಇಲ್ಲಿನ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ.
ಈ ಕುರಿತು ಜೆಡಿಎಸ್ ಅಭ್ಯರ್ಥಿ ತೂಪಲ್ಲಿ ಚೌಡರೆಡ್ಡಿ ಮಾತನಾಡಿ, ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದು, ಎರಡನೇ ಬಾರಿ ಅಗ್ನಿ ಪರೀಕ್ಷೆ ಎದುರಿಸುತ್ತಿದ್ದೇನೆ. ಇಲ್ಲಿನ ಮತದಾರರು ಕೈಬಿಡುವುದಿಲ್ಲ ಎಂಬ ನಂಬಿಕೆಯಿದೆ. ಕಳೆದ 10 ವರ್ಷಗಳಿಂದ ಈ ಭಾಗದಲ್ಲಿ ನಾನು ಸಾಕಷ್ಟು ಕೆಲಸಗಳನ್ನು ಮಾಡಿದ್ದೇನೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅದು ನನಗೆ ವರದಾನವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಈ ಭಾಗದ ಐದು ಜಿಲ್ಲೆಗಳಲ್ಲಿ 32 ತಾಲೂಕುಗಳು ಬರುತ್ತವೆ. ಅಯಾ ಕ್ಷೇತ್ರದ ಮುಖಂಡರ ಮಾರ್ಗದರ್ಶದಂತೆ ನಾನು ನಡೆದುಕೊಳ್ಳುತ್ತೇನೆ. ಹೊಸದಾಗಿ ಒಂದು ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ. ಅವರು ನನಗೆ ಮತ ನೀಡಿ ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.