ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿಗೆ ಔಷಧವನ್ನು ಕಂಡು ಹಿಡಿಯಲು ಹಾಗೂ ಅದನ್ನು ತಡೆಯಲು ಕೊರೊನಾ ಸೇನಾನಿಗಳು ಮತ್ತು ಸರ್ಕಾರ ಸಾಕಷ್ಟು ಕಸರತ್ತು ನಡೆಸುತ್ತಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯ ನಡುವೆ ಚಿಕ್ಕಬಳ್ಳಾಪುರದಲ್ಲಿ ನಕಲಿ ಡಾಕ್ಟರ್ಗಳ ಹಾವಳಿ ಹೆಚ್ಚುತ್ತಿದ್ದು, ಜನತೆ ಭಯಭೀತರಾಗಿದ್ದಾರೆ.
ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿಯ ಮನೆಯೊಂದರಲ್ಲಿ ಕೆಮ್ಮು, ಜ್ವರ, ನೆಗಡಿ ಸೇರಿದಂತೆ ಎಲ್ಲಾ ಅನಾರೋಗ್ಯಕ್ಕೂ ಚಿಕಿತ್ಸೆ ನೀಡಲಾಗುತ್ತಿದೆ. ಆರ್‌ಎಂಪಿ ಡಾಕ್ಟರ್ ಎಂದು ಹೇಳಿಕೊಂಡು ಸರಿಯಾದ ರೀತಿಯಲ್ಲಿ ತಪಾಸಣೆ ಮಾಡದೇ ಚಿಕಿತ್ಸೆ ನೀಡುತ್ತಿರುವುದು ಬೆಳಕಿಗೆ ಬಂದಿದೆ. ರೋಗಿಗಳಿಗೆ ಇಂಜೆಕ್ಷನ್ ಸೇರಿದಂತೆ ಗ್ಲೂಕೋಸ್ ಬಾಟಲಿ, ಐರನ್ ಇಂಜೆಕ್ಷನ್ ನೀಡಲಾಗುತ್ತಿದೆ. ಸದ್ಯ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತಗೆದುಕೊಳ್ಳದೆ ಬಂದ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ.
ಸಿದ್ದೇಪಲ್ಲಿ ಕ್ರಾಸ್ ನೆರೆ ರಾಜ್ಯ ಆಂಧ್ರಪ್ರದೇಶಕ್ಕೆ ಸಮೀಪದಲ್ಲಿದ್ದು, ಸಾಕಷ್ಟು ಜನತೆ ಅಲ್ಲಿಗೆ ಹೋಗಿ ಹಿಂತಿರುಗಿದ್ದಾರೆ. ಸದ್ಯ ಇಂತಹ ಪರಿಸ್ಥಿತಿಯಲ್ಲಿ ಮನೆಯಲ್ಲಿ ಚಿಕಿತ್ಸೆ ನೀಡಲು ಅಧಿಕಾರ ಕೊಟ್ಟವರು ಯಾರು? ಎಂಬ ಪ್ರಶ್ನೆ ಕೇಳಿ ಬರುತ್ತಿದೆ.
ವೈದ್ಯಕೀಯ ಶಿಕ್ಷಣ ಸಚಿವರ ಇಂತಹ ಪ್ರಕರಣ ಬೆಳಕಿಗೆ ಬಂದಿದೆ. ಸರ್ಕಾರ ತುರ್ತಾಗಿ ಇತ್ತ ಕಡೆ ಗಮನಹರಿಸಿ ಕ್ರಮ ಕೈಗೊಳ್ಳಬೇಕಿದೆ.