ETV Bharat / state

ಚಿಕ್ಕಬಳ್ಳಾಪುರದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ - Chikkaballapura DC Anirudh Shravan

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ‌ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗಿದ್ದು, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್​ ಧ್ವಜಾರೋಹಣ ನೆರವೇರಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ‌ ಸ್ವಾತಂತ್ರ್ಯ ದಿನಾಚರಣೆ
author img

By

Published : Aug 15, 2019, 5:37 PM IST

ಚಿಕ್ಕಬಳ್ಳಾಪುರ: 73ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಚಿಕ್ಕಬಳ್ಳಾಪುರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್​ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬರ ಆವರಿಸಿದೆ. ಅಂತರ್ಜಲಮಟ್ಟ ವೃದ್ಧಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿವರಿಸಿ, ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ‌ ಸ್ವಾತಂತ್ರ್ಯ ದಿನಾಚರಣೆ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ನೀರಿನ ಸಂರಕ್ಷಣೆ, ಪರಿಸರ ರಕ್ಷಣೆ, ಸ್ವಚ್ಛತೆ ಕುರಿತಾದ ನಾಟಕಗಳು ಹಾಗೂ ನೃತ್ಯರೂಪಕಗಳು ಆಯೋಜನೆಗೊಂಡಿದ್ದವು.

ಇದೇ ವೇಳೆ ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಹಣವನ್ನು ಸಂಗ್ರಹಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಳುಹಿಸಲಾಯಿತು. ಹಿರಿಯ ನಾಗರಿಕರಿಗೆ, ಸಾಧಕರಿಗೆ, ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.

Intro:ಪ್ರಪಂಚದೆಲ್ಲೆಡೆ ಸ್ವತಂತ್ರ ದಿನೋತ್ಸವನ್ನು ಆಚರಣೆ ಮಾಡುತ್ತಿದ್ದು ಬಹಳ ವಿಜ್ರುಂಭಣೆಯಿಂದ ಆಚರಿಸಲಾಗುತ್ತಿದೆ.ಇನ್ನೂ ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲಯಲ್ಲೂ ಸ್ವತಂತ್ರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

Body:ಇನ್ನೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ‌ ಮೊದಲ ಬಾರೀಗೆ ಜಿಲ್ಲಾಧಿಕಾರಿಗಳು ಧ್ವಜಾರೋಹಣ ವನ್ನು ನೇರವೇರಿಸಿ ಜಿಲ್ಲೆಯ ಬಗ್ಗೆ ವಿವರಣೆ ನೀಡಿದರು.ಇನ್ನೂ ಜಿಲ್ಲೆ ಬರದಿಂದ ಕೂಡಿದ್ದು ಅತಂರ್ ಜಲ ಮಟ್ಟವನ್ನು ಯಾವ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿವರಿಸಿದರು.ಮಳೆಕೊಯ್ಲು ಸೇರಿದಂತೆ ನೀರಿನ ಬಳಕೆಯನ್ನು ತಿಳಿಸಿದ ಜಿಲ್ಲಾಧಿಕಾರಿಗಳು ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಿದರು.

ಇನ್ನೂ ಮುಂಜಾನೆಯಿಂದಲೂ ಬಿಸಿಲನ್ನು ಲೆಕ್ಕಿಸದೆ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಿ ಎಲ್ಲರನ್ನು ರಂಜಿಸಿದರು. ನೀರಿನ ಸಂರಕ್ಷಣೆ ಸೇರಿದಂತೆ ,ಪರಿಸರ ರಕ್ಷಣೆ,ಸ್ವಚ್ಛತೆಯ ಬಗ್ಗೆ ಹಲವಾರು ನಾಟಕಗಳು, ನೃತ್ಯಗಳನ್ನು ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.ಅದೇ ರೀತಿ ದೇಶ ಭಕ್ತಿಗೀತೆಗಳಿಗೆ ನೃತ್ಯಗಳನ್ನು ಮಾಡಿ ಎಲ್ಲರನ್ನು ರಂಜಿಸಿದರು.

ಇನ್ನೂ ಇದೇ ವೇಳೆ ನೇರೆ ಸಂತ್ರಸ್ಥರಿಗೆ ಹಣವನ್ನು ಸಂಗ್ರಹಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಳುಹಿಸಲಾಯಿತು. ಹಿರಿಯ ನಾಗರಿಕರಿಗೆ,ಸಾಧಕರಿಗೆ,ಉತ್ತಮ ಅಂಕಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಿಗೆ ಸನ್ಮಾನ ವನ್ನು ಮಾಡಲಾಯಿತು.ಇನ್ನೂ ಈ ಹಿಂದೆಯಷ್ಟೇ ಜಿಲ್ಲೆಯಿಂದ ವರ್ಗಾವಣೆಗೊಂಡ ಜಿಲ್ಲಾಧಿಕಾರಿಗಳಿಗೆ ಹಲವರು ಸಂಘಸಂಸ್ಥೆಗಳು,ಸರ್ಕಾರಿ ಅಧಿಕಾರಿಗಳು ಸನ್ಮಾನವನ್ನು ಮಾಡಲಾಯಿತು.

ಇನ್ನೂ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿಎನ್ ಬಚ್ಚೇಗೌಡ ಸೇರಿದಂತೆ ನೂತನ ಸಿಇಓ ಪೌಜಿಯಾ ತರನ್ನುಂ ಸೇರಿದಂತೆ ಜಿಲ್ಲಾ ಅಧಿಕಾರಿಗಳು ಭಾಗಿಯಾಗಿದ್ದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.