ETV Bharat / state

ಸಿಎಂ ಬದಲಾವಣೆ ಬಗ್ಗೆ ನಾವು ಮಾತನಾಡದೇ ಇರುವುದು ಒಳ್ಳೆಯದು: ಡಾ.ಕೆ.ಸುಧಾಕರ್ - ಸಾಂಕ್ರಾಮಿಕ ರೋಗದ ಬಗ್ಗೆ ಸುಧಾಕರ್ ಮಾಹಿತಿ

ನೆರೆ ಸಂತ್ರಸ್ತ ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಬೇಕಾಗಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆಯಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

dr-k-sudhakar
ಡಾ. ಕೆ. ಸುಧಾಕರ್
author img

By

Published : Jul 25, 2021, 4:04 PM IST

Updated : Jul 25, 2021, 4:16 PM IST

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಇದೆ, ಮುಖ್ಯಮಂತ್ರಿ ಬಿಎಸ್​ವೈ ಇದ್ದಾರೆ. ನಾವು ಮಾತನಾಡದೇ ಇರುವುದು ಒಳ್ಳೆಯದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಅತಿಯಾದ ಮಳೆಯಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಹೀಗಾಗಿ ನೆರೆ ಸಂತ್ರಸ್ತ ಜಿಲ್ಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದಿದ್ದೇವೆ. ಕಾಳಜಿ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ನೀರಿನಿಂದ ಬರುವ ರೋಗಗಳಿಗೆ ಚಿಕಿತ್ಸೆ ನೀಡಲು ಕಾಳಜಿ ವಹಿಸಲಾಗುತ್ತಿದೆ. ಚಿಕಿತ್ಸೆ ನೀಡಲು ನೆರೆ ಸಂತ್ರಸ್ತರ ಪ್ರದೇಶಗಳಿಗೆ ಮೊಬೈಲ್ ಕ್ಲಿನಿಕ್‌ಗಳನ್ನು ಕಳಿಸಲಾಗುತ್ತಿದೆ. ನೆರೆ ಸಂತ್ರಸ್ತ ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಬೇಕಾಗಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆಯಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದೇನೆ ಎಂದರು.

ಇದನ್ನೂ ಓದಿ: ನಾನಿಲ್ಲಿ ಪ್ರವಾಹ ಪ್ರದೇಶದ ಭೇಟಿಗೆ ಬಂದಿದ್ದೇನೆ, ನಾಯಕತ್ವ ಚರ್ಚೆ ಬೇಡ: ಬಿಎಸ್‌ವೈ

Last Updated : Jul 25, 2021, 4:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.