ಗೌರಿಬಿದನೂರು/ಚಿಕ್ಕಬಳ್ಳಾಪುರ: ಕೇಂದ್ರ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಹುಟ್ಟುಹಬ್ಬ ಹಿನ್ನೆಲೆ ಜಾಲಪ್ಪ ಅಭಿಮಾನಿಗಳಿಂದ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಣೆ ಮಾಡಲಾಯ್ತು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಾಲಪ್ಪ ಅವರ 95ನೇ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ರೋಗಿಗಳಿಗೆ ಹಣ್ಣ-ಹಂಪಲು ವಿತರಣೆಯ ಕಾರ್ಯಕ್ರಮದಲ್ಲಿ ಜಾಲಪ್ಪ ಅಭಿಮಾನಿಗಳ ಸಂಘದ ಅಧ್ಯಕ್ಷ ಆರ್.ಅಶೋಕ್ ಕುಮಾರ್ ಮಾತನಾಡಿ, ಜಾಲಪ್ಪ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಅವರ ಅನುದಾನದಲ್ಲಿ ರಸ್ತೆಗಳ ಅಭಿವೃದ್ಧಿ, ಶಾಲಾ ಕಟ್ಟಡಗಳ ನಿರ್ಮಾಣ ಹಾಗೂ ತಾಲೂಕಿನ ಹಲವು ಕೆರೆಗಳಿಗೆ ನೀರು ತರುವಲ್ಲಿ ಅವರ ಶ್ರಮ, ಸೇವೆ ಅನನ್ಯವಾದದು ಎಂದ್ರು.
ಇದೇ ಸಮಯದಲ್ಲಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಮತ್ತು ಬಾಣಂತಿಯರಿಗೆ ಹಣ್ಣು, ಬ್ರೆಡ್ ವಿತರಿಸಲಾಯ್ತು. ಕಾರ್ಯಕ್ರಮದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಎಸ್.ರಮೇಶ್, ಪುರಸಭೆ ಮಾಜಿ ಅಧ್ಯಕ್ಷ ಅಲ್ಲಂಪಲ್ಲಿ ವೇಣು, ಅಶ್ವತ್ಥ್ ನಾರಾಯಣ್, ಜೆಡಿಎಸ್ನ ಸಲೀಂ ಸುಲೇಮಾನ್, ತೊಂಡೇಬಾವಿ ಪ್ರಭು ನಟರಾಜ್ ಕಲಿನಾಯಕನಹಳ್ಳಿ ಗೋಪಿ, ಪ್ರಭುದೇವ ಮೊದಲಾದವರು ಹಾಜರಿದ್ದರು.