ETV Bharat / state

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಈಗಲೇ ಅಭ್ಯರ್ಥಿ ಹೆಸರು ಘೋಷಿಸಿದ ಜೆಡಿಎಸ್​! - ಬಾಗೇಪಲ್ಲಿ ಕ್ಷೇತ್ರಕ್ಕೆ ಡಿ ಜೆ ನಾಗರಾಜ ರೆಡ್ಡಿ ಅಭ್ಯರ್ಥಿ

2023ರ ವಿಧಾನಸಭೆ ಚುನಾವಣೆಗೆ ಎರಡು ವರ್ಷ ಬಾಕಿ ಇರುವಾಗಲೇ ಹೆಚ್. ಡಿ. ಕುಮಾರಸ್ವಾಮಿ​​ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಡಿ.ಜೆ.ನಾಗರಾಜರೆಡ್ಡಿ ಅವರನ್ನು ಜೆಡಿಎಸ್​ ಅಭ್ಯರ್ಥಿಯಾಗಿ​ ಘೋಷಿಸಿದ್ದಾರೆ.

vidhansabha election 2023
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್​ ಅಭ್ಯರ್ಥಿ ಘೋಷಣೆ
author img

By

Published : Sep 4, 2021, 3:17 PM IST

ಚಿಕ್ಕಬಳ್ಳಾಪುರ: 2023ರ ವಿಧಾನಸಭೆ ಚುನಾವಣೆಗೆ ಈಗಾಗಲೇ ಜೆಡಿಎಸ್ ಪಕ್ಷ ಸಿದ್ಧತೆ ಆರಂಭಿಸಿದೆ. ಚುನಾವಣೆಗೆ ಎರಡು ವರ್ಷ ಬಾಕಿ ಇರುವಾಗಲೇ ಮಾಜಿ ಸಿಎಂ ಕುಮಾರಸ್ವಾಮಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಡಿ.ಜೆ.ನಾಗರಾಜರೆಡ್ಡಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್​ ಅಭ್ಯರ್ಥಿ ಘೋಷಣೆ

ಈ ವೇಳೆ ಪ್ರತಿಕ್ರಿಯಿಸಿದ ನಾಗರಾಜರೆಡ್ಡಿ, 2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿಯಾಗ್ತಿನಿ, ಕುಮಾರಸ್ವಾಮಿ ನನ್ನ ಹೆಸರನ್ನೇ ಘೋಷಣೆ ಮಾಡಿದ್ದಾರೆ. ನಾನೆ ಶಾಸಕನೂ ಆಗ್ತಿನಿ ಅಂತಾ ವಿಶ್ವಾಸ ವ್ಯಕ್ತಪಡಿಸಿದರು.

ಬಾಗೇಪಲ್ಲಿ ಕ್ಷೇತ್ರದ ಪ್ರಭಾವಿ ಮುಖಂಡರಾಗಿರುವ ಡಿ ಜೆ ನಾಗರಾಜ ರೆಡ್ಡಿ ಸುಪ್ರೀಂಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿಗಳ ಹತ್ತಿರದ ಸಂಬಂಧಿಯೂ ಹೌದು.

ಇಂದು ಬಾಗೇಪಲ್ಲಿಯ ಜೆಡಿಎಸ್ ಪ್ರಭಾವಿ ಮುಖಂಡ ಹರಿನಾಥ್ ರೆಡ್ಡಿ ಹಾಗೂ ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜುನಾಥ್ ನೇತೃತ್ವದಲ್ಲಿ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಅವರನ್ನು ಗೆಸ್ಟ್ ಹೌಸ್​ನಲ್ಲಿ ಭೇಟಿ ಮಾಡಿದ್ರು. ಈ ವೇಳೆ ನಾಗರಾಜ್ ರೆಡ್ಡಿ ಅವರಿಗೆ ಟಿಕೆಟ್​ ನೀಡುವುದಾಗಿ ಕುಮಾರಸ್ವಾಮಿ ಘೋಷಿಸಿದ್ರು. ಹಾಗೂ ಇಂದಿನಿಂದಲೇ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಸೂಚಿಸಿದ್ರು.

ಪಕ್ಷೇತರ ಆಗಿ ಸ್ಪರ್ಧಿಸಿದ್ದ ನಾಗರಾಜ್​

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಟಿಕೆಟ್ ವಂಚಿತರಾಗಿದ್ದ ಡಿ.ಜೆ ನಾಗರಾಜರೆಡ್ಡಿ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ಮೂಲಕ ಪಕ್ಷದ ಅಧಿಕೃತ ಅಭ್ಯರ್ಥಿ ಸಿ.ಆರ್ ಮನೋಹರ್ ಸೋಲಿಗೆ ಕಾರಣರಾಗಿದ್ರು.

ಈ ಹಿನ್ನೆಲೆ ಜೆಡಿಎಸ್ ವರಿಷ್ಠರು ಹಿಂದಿನ ತಪ್ಪು ಮರುಕಳಿಸದಂತೆ ಈ ಬಾರಿ ಅಡ್ವಾನ್ಸ್ ಆಗಿ ಡಿ.ಜೆ.ನಾಗರಾಜ್ ರೆಡ್ಡಿಗೆ ಪಕ್ಷದ ಟಿಕೆಟ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ವಿಚಾರ ನಾಗರಾಜ್ ಹಾಗೂ ಜೆಡಿಎಸ್ ಕಾರ್ಯಕರ್ತರಲ್ಲಿ ಸಂತಸ ಇಮ್ಮಡಿಯಾಗುವಂತೆ ಮಾಡಿದೆ.

ಈ ಬಾರಿ ರಾಜ್ಯದಲ್ಲಿ 120ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರ ನಡೆಸಲಿದ್ದಾರೆ ಎಂದು ಜೆಡಿಎಸ್ ಮುಖಂಡರಾದ ಗೊಟ್ಟಿಗೆರೆ ಮಂಜುನಾಥ್ ಮತ್ತು ಜೆಡಿಎಸ್ ಮುಖಂಡ ಹರಿನಾಥರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.