ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಭೂ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ ಮತ್ತು ಹೈನು ಕೃಷಿಕರಿಗೆ ಹಾಲಿನ ದರ ಕಡಿತ ವಿರೋಧಿಸಿ ಜಿಲ್ಲಾ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಜೆಡಿಎಸ್, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು. ಭೂ ಸುಧಾರಣಾ ಕಾಯ್ದೆ,ಎಪಿಎಂಸಿ ಕಾಯ್ದೆ, ಕೈಗಾರಿಕಾ ವಾಣಿಜ್ಯ ಕಾಯ್ದೆ, ಗುತ್ತಿಗೆ ಕಾರ್ಮಿಕರ ನಿಯಂತ್ರಣ ಕಾಯ್ದೆ ಸೇರಿದಂತೆ ಹಲವು ರೈತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗೆ ಮೂಲಕ ಮನವಿ ಮಾಡಲಾಯಿತು.
ಪ್ರತಿಭಟನೆಯಲ್ಲಿ ಚಿಕ್ಕಬಳ್ಳಾಪುರ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ , ಚಿಂತಾಮಣಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, ಶಿಡ್ಲಘಟ್ಟ ಜೆಡಿಎಸ್ ಮುಖಂಡ ಮೇಲೂರು ರವಿಕುಮಾರ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುನೇಗೌಡ ಸೇರಿದಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.