ಚಿಕ್ಕಬಳ್ಳಾಪುರ: ಗಡಿಭಾಗದಲ್ಲಿ ಜಿಟಿಜಿಟಿ ಮಳೆಯನ್ನೂ ಲೆಕ್ಕಿಸದೆ ಇಡೀ ಗ್ರಾಮವೇ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿರುವ ಮೂಲಕ ಮಾತೃಭಾಷೆಯ ಪ್ರೇಮ ಮೆರೆದಿರುವ ಘಟನೆ ತಾಲೂಕಿನ ನಂದಿ ಗ್ರಾಮದಲ್ಲಿ ನಡೆದಿದೆ.
ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ನಂದಿ ಗ್ರಾಮದ ಭೋಗ ನಂದೀಶ್ವರ ದೇವಸ್ಥಾನದ ಮುಂಭಾಗ ಭೋಗನಂದೀಶ್ವರ ಸ್ವಾಮಿ ಆಟೋ ಚಾಲಕರ ಸಂಘ, ಕೆಎಸ್ಎಸ್‌ಡಿ ಆಟೋಚಾಲಕರ ಸಂಘ ಹಾಗೂ ನಂದಿ ಗ್ರಾಮಪಂಚಾಯತಿ ವತಿಯಿಂದ 18 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಮುಂಜಾನೆಯಿಂದಲೂ ಮಳೆ ಆರ್ಭಟ ಜೋರಾಗಿದ್ದರೂ, ಕಾರ್ಯಕ್ರಮವನ್ನು ನಿಲ್ಲಿಸದೇ ಮಳೆಯಲ್ಲಿಯೇ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು. ಶಾಲಾ ಮಕ್ಕಳು ಜಿಟಿಜಿಟಿ ಮಳೆಯನ್ನೂ ಲೆಕ್ಕಿಸದೇ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ನೃತ್ಯದ ಮೂಲಕ ಎಲ್ಲರನ್ನು ಆಕರ್ಷಿಸಿದರು.
ಇದನ್ನೂ ಓದಿ: ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ಬೃಹತ್ ದತ್ತಮಾಲಾ ಶೋಭಾಯಾತ್ರೆ ಆರಂಭ