ಚಿಕ್ಕಬಳ್ಳಾಪುರ : ವಿದೇಶಿ ಹಾಲನ್ನು ಆಮದು ಮಾಡಿಕೊಳ್ಳುತ್ತಿರುವುದನ್ನು ತಕ್ಷಣ ರದ್ದು ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರೈತ ಸಂಘ ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ತಾಲೂಕು ಕಚೇರಿ ಮುಂಭಾಗ ಪ್ರತಿಭಟಿಸಿತು.
ವಿದೇಶಿ ಹಾಲನ್ನು ಆಮದು ಮಾಡುವುದರಿಂದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಹೆಚ್ಚಿನ ರೀತಿಯ ತೊಂದರೆ ಉಂಟಾಗುತ್ತದೆ. ಸದ್ಯ ಚಿಂತಾಮಣಿ ತಾಲೂಕಿನಲ್ಲಿ ಯಾವುದೇ ಶಾಶ್ವತ ನೀರಾವರಿ ಮೂಲಗಳಿಲ್ಲ. ಆದರೂ ಹಸುಗಳು ಸಾಕಿ ಹಾಲು ಸರಬರಾಜು ಮಾಡುತ್ತಿದ್ದಾರೆ. ಈ ಭಾಗದ ರೈತರು ಬಹುತೇಕ ಹೈನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿದ್ದಾರೆ. ವಿದೇಶಗಳಿಂದ ಹಾಲನ್ನು ಆಮದು ಮಾಡಿಕೊಳ್ಳುವುದಾದರೆ ಈ ಭಾಗದ ಜನ ರೈತರು ಒಲಸೆ ಹೋಗುವ ಪ್ರಮೇಯ ನಿರ್ಮಾಣವಾಗುತ್ತದೆ. ಇದರಿಂದ ಕೃಷಿ ಕ್ಷೇತ್ರದ ಮೇಲೆ ದುಷ್ಟ ಪ್ರಬಾವ ಬೀರುತ್ತದೆ. ಕೇಂದ್ರ ಸರ್ಕಾರ ಆರ್ಸಿಇಟಿ ಒಪ್ಪಂದವನ್ನು ತಕ್ಷಣ ರದ್ದು ಮಾಡಿ ರೈತರನ್ನು ರಕ್ಷಣೆ ಮಾಡಬೇಕೆಂದು ಒತ್ತಾಯಿಸಿ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರೈತ ಸಂಘದ ರಾಜ್ಯ ಅಧ್ಯಕ್ಷ ಜೆ ವಿ ರಘುನಾಥ ರೆಡ್ಡಿ, ಕೃಷ್ಣಪ್ಪ, ಅಶ್ವತ್ಥ್ ಗೌಡ ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದರು.