ಚಿಕ್ಕಬಳ್ಳಾಪುರ: ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಕೃಷ್ಣಾರೆಡ್ಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕೃಷಿ ಇಲಾಖೆಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ರೈತರಿಗೆ ಸರ್ಕಾರದ ಸೌಲಭ್ಯಗಳು ನೇರವಾಗಿ ಸಿಗುತ್ತಿಲ್ಲ. ಸರ್ಕಾರದ ಪ್ರತಿಯೊಂದು ಸೌಲಭ್ಯಗಳನ್ನು ರೈತರು ನೇರವಾಗಿ ಪಡೆಯಲು ಸಾಧ್ಯವಾಗುತ್ತಿಲ್ಲ. ಕೃಷಿ ಇಲಾಖೆಯಲ್ಲಿ ಹಲವು ಯೋಜನೆಗಳಿದ್ದರೂ ಈ ಬಗ್ಗೆ ರೈತರಿಗೆ ಏಕೆ ಅರಿವು ಮೂಡಿಸುತ್ತಿಲ್ಲ. ನಿಮ್ಮಂತಹ ಅಧಿಕಾರಿಗಳಿಂದಲೇ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳ ಮೇಲೆ ಫುಲ್ ಗರಂ ಆದರು.
ಇನ್ನು, ಹಲವಾರು ಕಡೆ ಅಕ್ರಮವಾಗಿ ಮರಗಳನ್ನು ಕಟಾವು ಮಾಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ಬಗ್ಗೆ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬೇಸಿಗೆ ಕಾಲ ಆರಂಭವಾಗುತ್ತಿದೆ. ಪ್ರತಿ ಹಳ್ಳಿಯಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಗಮನ ವಹಿಸಬೇಕು. ತಾಲೂಕಿನ ಯಾವುದೇ ಹಳ್ಳಿಯಲ್ಲಿ ನೀರಿನ ಸಮಸ್ಯೆ ಕಂಡು ಬಂದರೆ, ಕೂಡಲೇ ಬಗೆಹರಿಸಲು ಅಧಿಕಾರಿಗಳು ಅಲರ್ಟ್ ಆಗಿರಬೇಕು ಎಂದು ಸೂಚಿಸಿದರು.
ಓದಿ: ಅಭಿನಂದನಾ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ರೇಣುಕಾಚಾರ್ಯ
ಇನ್ನು, ಕೆಡಿಪಿ ಸಭೆ ನಡೆಯುತ್ತಿದಂತೆಯೇ ಕೆಲ ಅಧಿಕಾರಿಗಳು ನಿದ್ದೆಗೆ ಜಾರಿದ್ದರೆ, ಇನ್ನೂ ಕೆಲವರು ಮೊಬೈಲ್ ಬಳಕೆ ಮಾಡುವಲ್ಲಿ ಬ್ಯುಸಿಯಾಗಿದ್ದರು.