ಚಿಕ್ಕಬಳ್ಳಾಪುರ: ಕೆಎಸ್ಆರ್ಟಿಸಿ ಬಸ್‌ನ ಟೈರ್ ಸಿಡಿದು ಕಂಟೈನರ್ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.
ಬಾಗೇಪಲ್ಲಿಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ದೊಡ್ಡಬಳ್ಳಾಪುರ ಘಟಕಕ್ಕೆ ಸೇರಿದ ಬಸ್ ಚಿಕ್ಕಬಳ್ಳಾಪುರದತ್ತ ಸಾಗುತ್ತಿತ್ತು. ಈ ವೇಳೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಬಸ್‌ನ ಮುಂಭಾಗದ ಟೈರ್ ಸಿಡಿದು ಚಾಲಕನ ನಿಯಂತ್ರಣ ಕಳೆದುಕೊಂಡಿತ್ತು. ನಂತರ ಬಸ್ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ನಿಲ್ಲಿಸಿದ್ದ ಕಂಟೈನರ್ ಮತ್ತು ಜಾಹೀರಾತು ಫಲಕಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಚಾಲಕ ಸೇರಿದಂತೆ 15 ಪ್ರಯಾಣಿಕರು ಗಂಭೀರವಾಗಿ ಗಾಯಗಗೊಂಡಿದ್ದಾರೆ. ಗಾಯಾಳುಗಳನ್ನು ಬಾಗೇಪಲ್ಲಿ ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಲಾಗಿದೆ.