ಕರ್ನಾಟಕ ಹಾಲು ಉತ್ಪಾದಕರ ಸಂಘದಿಂದ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತಕ್ಕೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸಂಸ್ಥೆಯಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು, ಲೆಕ್ಕಾಧಿಕಾರಿ ಸೇರಿದಂತೆ ಒಟ್ಟು 179 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆ, ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆ ವಿವರ:
- ಸಹಾಯಕ ವ್ಯವಸ್ಥಾಪಕರು (ಎಎಚ್ ಮತ್ತು ಎಐ) -26
- ಸಹಾಯಕ ವ್ಯವಸ್ಥಾಪಕರು (ಹಣಕಾಸು ) - 1
- ತಾಂತ್ರಿಕ ಅಧಿಕಾರಿ ಡಿಟಿ - 15
- ಮಾರ್ಕೆಟಿಂಗ್ ಅಧಿಕಾರಿ - 1
- ಸಿಸ್ಟಂ ಅಧಿಕಾರಿ - 1
- ಕೃಷಿ ಅಧಿಕಾರಿ - 3
- ಆಡಳಿತಾತ್ಮಕ ಅಧಿಕಾರಿ - 1
- ತಾಂತ್ರಿಕ ಅಧಿಕಾರಿ - 1
- ಲೆಕ್ಕಾಧಿಕಾರಿ - 1
- ವಿಸ್ತರಣಾಧಿಕಾರಿ ಗ್ರೇಡ್3 -13
- ಡೈರಿ ಮೇಲ್ವಿಚಾರಕರು ಗ್ರೇಡ್2 - 12
- ಆಡಳಿತಾತ್ಮಕ ಸಹಾಯಕ ಗ್ರೇಡ್2 -24
- ಕೆಮಿಸ್ಟ್ ಗ್ರೇಡ್2 -21
- ಅಕೌಂಟ್ ಅಸಿಸ್ಟಂಟ್ ಗ್ರೇಡ್2 -21
- ಮಾರ್ಕೆಟಿಂಗ್ ಅಸಿಸ್ಟಂಟ್ ಗ್ರೇಡ್2 -11
- ಜ್ಯೂನಿಯರ್ ಸಿಸ್ಟಂ ಆಪರೇಟರ್ -15
- ಕೊ- ಆರ್ಡಿನೇಟರ್ - 6
ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ವಾಣಿಜ್ಯ, ಬಿಇ, ಸೇರಿದಂತೆ ಇನ್ನಿತರ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ನ ಮೂಲಭೂತ ಜ್ಞಾನವನ್ನು ಹೊಂದಿರುವುದು ಕಡ್ಡಾಯವಾಗಿದೆ. ಪದವಿಯಲ್ಲಿ ಕಂಪ್ಯೂಟರ್ ಅಭ್ಯಾಸ ಮಾಡಿದ ಅಭ್ಯರ್ಥಿಗಳು ಕಂಪ್ಯೂಟರ್ ಸರ್ಟಿಫಿಕೆಟ್ ಸಲ್ಲಿಕೆ ಮಾಡಲು ವಿನಾಯಿತಿ ಹೊಂದಿರುತ್ತಾರೆ.
ವೇತನ: ಹುದ್ದೆಗೆ ಅನುಸಾರವಾಗಿ 27650-97100 ರೂ. ವೇತನವನ್ನು ನಿಗದಿಸಲಾಗಿದೆ.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 500 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.
ಈ ಹುದ್ದೆಗಳಿಗೆ ಸೆಪ್ಟೆಂಬರ್ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 6 ಆಗಿದೆ.
ಈ ಹುದ್ದೆ ನೇಮಕಾತಿಯ ಸಂಪೂರ್ಣ ವಿವರ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು komul.coop ಈ ಜಾಲತಾಣಕ್ಕೆ ಭೇಟಿ ನೀಡಬೇಕಿದೆ.