ETV Bharat / state

ಬಸ್​​ಪಾಸ್ ವಿಚಾರಕ್ಕೆ ಗಲಾಟೆ.. ಬಸ್​​​ ಕಂಡಕ್ಟರ್​​ಗೆ ಮನಸೋ ಇಚ್ಛೆ ಥಳಿಸಿದ ಯುವಕರು.. - chikkaballapura news

ಬಸ್​​ ಪಾಸ್​​ನಲ್ಲಿ ಮಾರ್ಗ ಬದಲಾವಣೆ ವಿಚಾರದಲ್ಲಿ ಇಬ್ಬರಿಗೂ ಗಲಾಟೆ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಸಿಟ್ಟಿಗೆದ್ದ ಯುವಕ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದಾನೆ. ಈತನ ಜೊತೆಗಿದ್ದ ಯುವಕರು ಸಹ ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿದ್ದಾರೆ..

ksrtc-conductor-attacked-by-youths-for-bus-pass-issue
ಬಸ್​​ಪಾಸ್ ವಿಚಾರಕ್ಕೆ ಗಲಾಟೆ..ಬಸ್​​​ ಕಂಡಕ್ಟರ್​​ಗೆ ಮನಸೋ ಇಚ್ಛೆ ಥಳಿಸಿದ ಯುವಕರು
author img

By

Published : Oct 13, 2021, 2:35 PM IST

ಚಿಕ್ಕಬಳ್ಳಾಪುರ : ಕೆಎಸ್​​ಆರ್​ಟಿಸಿ ಬಸ್‌ನಲ್ಲಿ ಸಂಚರಿಸುತ್ತಿದ್ದ ಯುವಕನನ್ನು ಟಿಕೆಟ್ ತೆಗೆದುಕೋ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾಗೇಪಲ್ಲಿ ಡಿಪೋಗೆ ಸೇರಿದ್ದ ಸಾರಿಗೆ ಬಸ್ ಕಂಡಕ್ಟರ್ ತಿಮ್ಮಯ್ಯ ಎಂಬುವರ ಮೇಲೆ‌ ತಡರಾತ್ರಿ ಮಾರಣಾಂತಿಕ ಹಲ್ಲೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ತಿಮ್ಮಯ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಬಸ್​​ ಪಾಸ್​​ನಲ್ಲಿ ಮಾರ್ಗ ಬದಲಾವಣೆ ವಿಚಾರದಲ್ಲಿ ಇಬ್ಬರಿಗೂ ಗಲಾಟೆ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಸಿಟ್ಟಿಗೆದ್ದ ಯುವಕ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದಾನೆ. ಈತನ ಜೊತೆಗಿದ್ದ ಯುವಕರು ಸಹ ಕಂಡಕ್ಟರ್‌ ಮೇಲೆ ಹಲ್ಲೆ ನಡೆಸಿದ್ದಾರೆ.

ಕಂಡಕ್ಟರ್​ಗೆ ಗಂಭೀರ ಗಾಯಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಹಾವಿನಿಂದ ಕಚ್ಚಿಸಿ, ಆಸ್ತಿಗಾಗಿ ಪತ್ನಿಯನ್ನು ಕೊಂದಿದ್ದ ಅಪರಾಧಿಗೆ ಎರಡು ಜೀವಾವಧಿ ಶಿಕ್ಷೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.