ETV Bharat / state

ಚಿಕ್ಕಬಳ್ಳಾಪುರ: ಮನೆಗೆ ಮರಳುತ್ತಿದ್ದ ಕಾರ್ಮಿಕನ ಅಡ್ಡಗಟ್ಟಿ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು - chikkaballapur murder case

ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಕಾರ್ಮಿಕನ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಈ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

horrible murder in chikkaballapur
horrible murder in chikkaballapur
author img

By

Published : Aug 3, 2022, 7:21 PM IST

ಬಾಗೇಪಲ್ಲಿ: ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ನಡುರಸ್ತೆಯಲ್ಲೇ ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಕ್ರಾಸ್ ಬಳಿ ನಡೆದಿದೆ. ಆದಿಗಾನಹಳ್ಳಿ ಗ್ರಾಮದ 38 ವರ್ಷದ ಶ್ರೀನಿವಾಸ್ ಕೊಲೆಯಾದ ದುರ್ದೈವಿ.

ಟೋಲ್ ಪ್ಲಾಜಾ ಬಳಿಯ ವೇ-ಬ್ರಿಡ್ಜ್​​ನಲ್ಲಿ ಕಾರ್ಮಿಕನಾಗಿದ್ದ ಶ್ರೀನಿವಾಸ್ ರಾತ್ರಿ ಪಾಳಿಯ ಕೆಲಸ ಮುಗಿಸಿಕೊಂಡು ವಾಪಸ್ ಮನೆಗೆ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳಗ್ಗೆ ಶ್ರೀನಿವಾಸ್ ಕೊಲೆ ಆಗಿರುವ ಬಗ್ಗೆ ಮಾಹಿತಿ ಪಡೆದ ಚಿಕ್ಕಬಳ್ಳಾಪುರ ಎಸ್​ಪಿ ಡಿ.ಎಲ್.ನಾಗೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಪತ್ತೆಗಾಗಿ ಪೊಲೀಸ್ ತಂಡಗಳನ್ನ ರಚಿಸಿದ್ದು ತೀವ್ರ ಶೋಧ ಮುಂದುವರಿಸಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಗುಜರಾತ್: ಸ್ನಾನ ಮಾಡಲೆಂದು ಹೋಗಿ ಹೊಂಡದಲ್ಲಿ ಮುಳುಗಿ ಐವರು ಮಕ್ಕಳು ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.