ಚಿಕ್ಕಬಳ್ಳಾಪುರ: ಎಲ್ಲೆಡೆ ಲೋಕಸಭಾ ಚುನಾವಣೆಯ ಫಲಿತಾಂಶದ ಕಾವು ಹೆಚ್ಚಾಗಿದೆ. ಆದರೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದ ಬಳಿ ಯಾವುದೇ ಪಕ್ಷದ ಅಭಿಮಾನಿಗಳು ಕಾಣಿಸಿಕೊಳ್ಳುತ್ತಿಲ್ಲ.
ಚಿಕ್ಕಬಳ್ಳಾಪುರ ಹೊರವಲಯದ ನಾಗಾರ್ಜುನ ಕಾಲೇಜು ಬಳಿ ನಡೆಯುತ್ತಿರುವ ಮತ ಎಣಿಕೆ ಕೇಂದ್ರ ಬಳಿ ಕೇವಲ ಬೆರಳೆಣಿಕೆಯಷ್ಟು ಜನ ಅಭಿಮಾನಿಗಳಿದ್ದು, ಮತ ಎಣಿಕೆ ಕೇಂದ್ರದ ಹೊರಾಂಗಣ ಬಿಕೋ ಎನ್ನುತ್ತಿದೆ.
ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಬಾರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.