ಚಿಕ್ಕಬಳ್ಳಾಪುರ: ವಿದ್ಯುತ್ ತಂತಿ ತಗುಲಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಗ್ರಾಮದಲ್ಲಿ ನಡೆದಿದೆ.
ಸೂಳೆಬಾವಿ ಗ್ರಾಮದ ನಾಗರಾಜ್ (26) ಮೃತಪಟ್ಟವ. ವಿದ್ಯುತ್ ಕಂಬದ ಮೇಲೆ ಜಂಪ್ ಸರಿಪಡಿಸುವ ವೇಳೆ ಈ ಅವಘಡ ಸಂಭವಿಸಿದೆ. ನಾಗರಾಜ್ ಒಂದು ವಾರದ ಹಿಂದೆಯಷ್ಟೇ ಮದುವೆ ನಿಶ್ಚಿತಾರ್ಥ ಕೂಡ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.
ಇನ್ನು ಈ ವರ್ಷದಲ್ಲಿ ವಿದ್ಯುತ್ ಶಾಕ್ ಹೊಡೆದು ಮೂರು ಜನ ಅಸುನೀಗಿದ್ದು, ಬೆಸ್ಕಾಂ ಇಲಾಖೆ, ಲೈನ್ ಮ್ಯಾನ್ಗಳ ಸುರಕ್ಷತೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.