ಚಿಕ್ಕಬಳ್ಳಾಪುರ: ಬಾಗೇಪಲ್ಲಿ ರಾಷ್ಟ್ರೀಯ ಹೆದ್ದಾರಿಯ ಆರ್ಟಿಒ ಚೆಕ್ಪೋಸ್ಟ್ ಕಚೇರಿ ಮೇಲೆ ದಿಢೀರ್ ದಾಳಿ ನಡೆಸುವ ಮೂಲಕ ಲೋಕಾಯುಕ್ತ ಸಂಸ್ಥೆ ಇಂದು ಬೆಳಗ್ಗೆ ಭ್ರಷ್ಟರಲ್ಲಿ ಮತ್ತೆ ನಡುಕ ಹುಟ್ಟಿಸಿದೆ.
ಲೋಕಾಯುಕ್ತ ಎಸ್ಪಿ ಮನೋಜ್ ನೇತೃತ್ವದಲ್ಲಿ ಬಾಗೇಪಲ್ಲಿ ಅರ್ಟಿಒ ಚೆಕ್ ಪೋಸ್ಟ್ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ವಾಹನ ಸವಾರರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಆರೋಪಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಹಣ ಮತ್ತು ದಾಖಲೆಗಳ ಶೋಧ ನಡೆಸಲಾಗುತ್ತಿದೆ. ಇನ್ನು ಈ ಚೆಕ್ ಪೋಸ್ಟ್ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೊರವಲಯದ ಆಂಧ್ರ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್ ಆಗಿದೆ.
ಇದನ್ನೂ ಓದಿ: ಬಾಗೇಪಲ್ಲಿ ಪೊಲೀಸರ ಕಾರ್ಯಾಚರಣೆ: 30 ದ್ವಿಚಕ್ರ ವಾಹನ ಜಪ್ತಿ