ಚಿಕ್ಕಬಳ್ಳಾಪುರ : ನಿಯಂತ್ರಣ ತಪ್ಪಿದ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗೌರಿಬಿದನೂರಿನಲ್ಲಿ ನಡೆದಿದೆ.
ಪಟ್ಟಣದ ಉಪ್ಪಾರ್ ಕಾಲೋನಿಯ ನಿವಾಸಿ ಅನಂತು (27) ಮೃತ ವ್ಯಕ್ತಿ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಳೆದ ಎಂಟು ತಿಂಗಳ ಹಿಂದೆಷ್ಟೇ ಈತ ಮದುವೆಯಾಗಿದ್ದ ಎಂಬ ವಿಚಾರ ಗೊತ್ತಾಗಿದೆ.
ರೇಮಂಡ್ಸ್ ಫ್ಯಾಕ್ಟರಿ ಬಳಿಯ ತಿರುವಿನಲ್ಲಿ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಪುರಠಾಣೆಯ ಪಿಎಸ್ಐ ಅವಿನಾಶ್ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.