ಚಿಂತಾಮಣಿ (ಚಿಕ್ಕಬಳ್ಳಾಪುರ) : ನ್ಯಾಯಮೂರ್ತಿ ಎ. ಜೆ. ಸದಾಶಿವ ಆಯೋಗ ವರದಿಯನ್ನು ಅನುಷ್ಠಾನಕ್ಕೆ ಆಗ್ರಹಿಸಿ ಸರ್ಕಾರದ ಮೇಲೆ ಒತ್ತಡ ತರಲು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಸೆಪ್ಟೆಂಬರ್ 14ರಂದು ಶಾಸಕರ ಮನೆಮುಂದೆ ಧರಣಿಗೆ ಕರೆ ನೀಡಿದ್ದಾರೆ.
ಸೆಪ್ಟೆಂಬರ್ 14 ರ ಸೋಮವಾರ ರಾಜ್ಯದ ಎಲ್ಲಾ ಶಾಸಕರುಗಳ ಮನೆ ಮುಂದೆ ಧರಣಿ, ಸತ್ಯಾಗ್ರಹ ಮತ್ತು ಮನವಿ ಪತ್ರ ಸಲ್ಲಿಕೆ ಹಾಗೂ ಚಿಂತಾಮಣಿ ವಿಧಾನಸಭಾ ಶಾಸಕರ ಮನೆ ಮುಂದೆ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಎಂ. ವಿ. ರಾಮಪ್ಪ ತಿಳಿಸಿದರು.
ಮುತ್ತಿಗೆ ಹಾಕುವ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ವಿ ವೆಂಕಟರವಣಪ್ಪ ಮತ್ತು ಮಹಿಳಾ ಉಪಾಧ್ಯಕ್ಷರಾದ ಧನಲಕ್ಷ್ಮಿ ರಾಜ್ಯ ಕಲಾ ಮಂಡಳಿ ಅಧ್ಯಕ್ಷರಾದ ಶಾಮರಾಜ್ ಆಟೋ ಶಂಕರ್ ಭಾಗವಹಿಸಲಿದ್ದಾರೆ ಎಂದರು.
ಶಾಸಕರುಗಳು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿಯನ್ನು ಅನುಷ್ಠಾನಕ್ಕೆ ತರಲು ಅಧಿವೇಶನದಲ್ಲಿ ಸರ್ಕಾರದ ಮೇಲೆ ಒತ್ತಡ ತರಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.