ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ತಾಲ್ಲೂಕು ಕಚೇರಿ ಮುಂಭಾಗ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಪರಿಶಿಷ್ಟ ಜಾತಿ ಜನಾಂಗದ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯದಲ್ಲಿ ಮೀಸಲಾತಿ ತಾರತಮ್ಯವನ್ನು ಸರಿಪಡಿಸಲು ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿಯನ್ನು ತಯಾರಿಸಿಕೊಂಡು ಎಂಟು ವರ್ಷಗಳು ಕಳೆದರೂ ಸಹ ಅದನ್ನು ಸದನದಲ್ಲಿ ಚರ್ಚಿಸಿ ಕೇಂದ್ರಕ್ಕೆ ಶಿಫಾರಸು ಮಾಡುವಲ್ಲಿ ಎಲ್ಲ ಸರಕಾರಗಳ ಮುಖ್ಯಮಂತ್ರಿಗಳು ಆಶ್ವಾಸನೆಗಳನ್ನು ನೀಡಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆಂದು ಪ್ರತಿಭಟನಾಕಾರರೂ ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೂಡಲೇ ಸದನದ ಉಪ ಸಮಿತಿಯಲ್ಲಿ ಮಂಡಿಸಿ ನಿರ್ಣಯಗಳನ್ನು ತೆಗೆದುಕೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದರೆ ಮುಂಬರುವ ವಿಧಾನಸಭೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮಾದಿಗರ ಬೆಂಬಲ ಸಿಗುತ್ತದೆ. ನಿರ್ಲಕ್ಷ್ಯ ತೋರಿದರೆ ಕಾಂಗ್ರೆಸ್ ಸರ್ಕಾರ ಬಂದಿರುವ ಸ್ಥಿತಿಗೆ ತಮ್ಮ ಸರ್ಕಾರಕ್ಕೆ ಬರುವುದರಲ್ಲಿ ಸಂಶಯವಿಲ್ಲವೆಂದು ಪ್ರತಿಭಟನಾಕಾರರು ಹೇಳಿದರು .
ನಂತರ ಮಾದಿಗ ಸಂಘಟನೆಗಳ ಒಕ್ಕೂಟದಿಂದ, ಮಾದಿಗ ಸಮಾಜ ಸಂಸದರಿಗೆ ಅವಮಾನ ಮಾಡಿ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯ ಬೀದಿಯೊಳಗೆ ಪ್ರವೇಶ ನಿರಾಕರಣೆ ಮಾಡಿರುವ ವಿರುದ್ಧ ಕ್ರಮ ಜರುಗಿಸಬೇಕು ಹಾಗೂ ಸದಾಶಿವ ಆಯೋಗದ ವರದಿಯನ್ನು ಕೂಡಲೇ ಜಾರಿ ಮಾಡಬೇಕೆಂದು ತಾಲ್ಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಎಂ.ವಿ ರಾಮಪ್ಪ ನಾರಾಯಣಸ್ವಾಮಿ. ಎಂ ಕೃಷ್ಣಪ್ಪ, ವೆಂಕಟರಾಯಪ್ಪ, ಮೂರ್ತಿ ಊಲವಾಡಿ ಕೃಷ್ಣಪ್ಪ, ಕೈವಾರ ಕೃಷ್ಣ, ಶಾಮರಾಜ್ ಮಂಜು ಸೇರಿದಂತೆ ಹಲವಾರು ಪದಾಧಿಕಾರಿಗಳು ಭಾಗವಹಿಸಿದ್ದರು.