ಚಿಂತಾಮಣಿ/ಚಿಕ್ಕಬಳ್ಳಾಪುರ: ನೆರೆ ರಾಜ್ಯ ಆಂಧ್ರ ಪ್ರದೇಶದಿಂದ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿತ್ತೂರು ಜಿಲ್ಲೆಯ ಪಾಲಮಂಡಲಂ ಗ್ರಾಮದ ಹರಿ ಬಿನ್ ಉಮಾಪತಿ (34) ಹಾಗೂ ವಿನೋಧ್ ಕುಮಾರ್ ಬಿನ್ ಭಾಸ್ಕರ್(27) ಬಂಧಿತ ಆರೋಪಿಗಳು. ತಾಲೂಕಿನ ಕೈವಾರ ಗ್ರಾಮದ ಮಸ್ತೆನಹಳ್ಳಿ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ವ್ಹೀಲ್ ಬ್ಯಾಗ್‌ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಂತೆ ಗ್ರಾಮಾಂತರ ವೃತ್ತದ ಸಿಪಿಐ ಶ್ರೀನಿವಾಸಪ್ಪ, ಪಿಎಸ್ಐ ನರೇಶ್ ನಾಯ್ಕ್ ದಾಳಿ ನಡೆಸಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 7 ಕೆಜಿ 400 ಗ್ರಾಂ ತೂಕದ ಒಟ್ಟು 3,00,000 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.