ಚಿಕ್ಕಬಳ್ಳಾಪುರ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ ಅಂಗವಾಗಿ ಗೌರಿಬಿದನೂರು ನಗರದಲ್ಲಿ ಸಂಗೊಳ್ಳಿ ರಾಯಣ್ಣ ಸೇನೆ ವತಿಯಿಂದ ಪಂಜಿನ ಮೆರವಣಿಗೆ ಮಾಡಲಾಯಿತು.
ನಗರದ ಪ್ರಮುಖ ಬೀದಿಗಳಲ್ಲಿ ಯುವಕರು ಪಂಜಿನ ಮೆರವಣಿಗೆ ನಡೆಸಿದರು, ಬಳಿಕ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕ್ಯಾಂಡಲ್ ಹಚ್ಚಿ ಮೌನಾಚರಣೆ ಮಾಡಲಾಯಿತು.
ಈ ವೇಳೆ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಕೆಂಪರಾಜು ಮಾತನಾಡಿ, ಯುವಜನತೆ ಹಾಗೂ ಸಾರ್ವಜನಿಕರು ಸಂಗೊಳ್ಳಿರಾಯಣ್ಣರವರ ಮಾರ್ಗದರ್ಶನದಲ್ಲಿ ನಡೆಯಬೇಕು. ರಾಯಣ್ಣ ನೆನಪಿಗಾಗಿ ಪಂಜಿನ ಮೆರವಣಿಗೆ ನಡೆಸಿ ಮೌನಚಾರಣೆ ಮಾಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಕೀಲ ರಾಮಚಂದ್ರ, ಸಂಗೊಳ್ಳಿ ರಾಯಣ್ಣ ಸೇನೆಯ ಅಧ್ಯಕ್ಷ ನಾಗರಾಜು ಸದಸ್ಯ ಮಾದೇಶ ಮುಂತಾದವರು ಇದ್ದರು.