ಚಿಕ್ಕಬಳ್ಳಾಪುರ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರ ವಿವಿಧ ಸಂಘಟನೆಗಳಿಂದ ಜಿಲ್ಲೆಯ ಚಿಂತಾಮಣಿ ಪಟ್ಟಣದಲ್ಲಿ ಬೃಹತ್ ರ‍್ಯಾಲಿ ನಡೆಯಿತು.
ರಾಷ್ಟ್ರೀಯ ಹಿತರಕ್ಷಾಣಾ ವೇದಿಕೆ, ವಿದ್ಯಾರ್ಥಿ ಸಂಘಟನೆಗಳು ಹಾಗೂ ಹಿಂದೂಪರ ಸಂಘಟನೆಗಳು ಆಯೋಜಿಸಿದ್ದ ರ‍್ಯಾಲಿ, ಪಟ್ಟಣದ ಶಿಡ್ಲಘಟ್ಟ ವೃತ್ತದಿಂದ ಆಂಜನೇಯ ವೃತ್ತದವರೆಗೆ ಸಾಗಿ ಬಂತು. ಸಾವಿರಾರು ಜನರು ಪಾಲ್ಗೊಂಡು ಬೆಂಬಲ ಸೂಚಿಸಿದರು.
ರ್ಯಾಲಿ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ನೇತೃತ್ವದಲ್ಲಿ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಾವಿರಾರು ಜನರು ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರಿಂದ ಪಟ್ಟಣದ ಹಲವೆಡೆ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.