ಚೇಳೂರು/ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆ ಸೋಂಕು ನಿಯಂತ್ರಣಕ್ಕಾಗಿ ಚೇಳೂರಿನ ಅಂಗಡಿ ಮಾಲೀಕರು ಮತ್ತು ವ್ಯಾಪಾರಸ್ಥರು ಸ್ವಯಂ ಪ್ರೇರಿತ ಲಾಕ್‌ಡೌನ್ ಘೋಷಿಸುವ ನಿರ್ಣಯ ಕೈಗೊಂಡಿದ್ದಾರೆ.
ಪಟ್ಟಣದ ಅಂಗಡಿ ಮಾಲೀಕರು ಮತ್ತು ವರ್ತಕರು ಗುರುವಾರ ಶ್ರೀ ರಾಮ ಸೀತಾ ಕಲ್ಯಾಣ ಮಂಟಪದ ಆವರಣದಲ್ಲಿ ಸಭೆ ಸೇರಿ ಇಂದಿನಿಂದ 31 ರವರೆಗೆ ಎಲ್ಲ ವಹಿವಾಟು ನಿಲ್ಲಿಸಿ ಲಾಕ್‌ಡೌನ್ ಮಾಡಲು ನಿರ್ಣಯ ಕೈಗೊಂಡಿದ್ದಾರೆ.
ಇಂದಿನಿಂದ 20 ದಿನಗಳ ಕಾಲ ಸ್ವಯಂ ಪ್ರೇರಿತ ಲಾಕ್‌ಡೌನ್ ಘೋಷಣೆ ಮಾಡಿದ್ದಾರೆ. ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು ಬೆಳಗ್ಗೆ 6 ಗಂಟೆಯಿಂದ 1 ಗಂಟೆಯವರೆಗೆ ಮಾತ್ರ ತೆರೆಯಲಿವೆ. ನಂತರ ಎಲ್ಲ ಅಂಗಡಿಗಳು ಬಂದ್ ಆಗಲಿವೆ. ಜಿಲ್ಲೆಯ ಚಿಂತಾಮಣಿ ಮತ್ತು ಬಾಗೇಪಲ್ಲಿ ಪಟ್ಟಣಗಳಲ್ಲಿ ಸಹ ಸ್ವಯಂ ಪ್ರೇರಿತ ಲಾಕ್‌ಡೌನ್ ಘೋಷಣೆ ಮಾಡಿದ್ದಾರೆ.