ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲೂಕಿನ ಹಿರೇನಾಗವಲ್ಲಿ ಬಳಿಯ ಕ್ವಾರಿ ಬಳಿ ಜಿಲೆಟಿನ್ ಸ್ಫೋಟಗೊಂಡ ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ದೆಹಲಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಅಧಿಕಾರಿಗಳೊಂದಿಗೆ ತಡರಾತ್ರಿ ಘಟನಾಸ್ಥಳಕ್ಕೆ ಭೇಟಿ ನೀಡಿ ಘಟನೆಗೆ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಮಾತಾನಾಡಿದ ಸಚಿವ, ಶಿಕ್ಷಣ ವಂಚಿತರು ಗಣಿಗಾರಿಕೆಯಲ್ಲಿ ತೊಡಗಿದ್ದಾರೆ. ಅಮಾಯಕರು ಸಾವಿಗೀಡಾಗುವುದನ್ನು ತಪ್ಪಿಸಲು ಶಿಕ್ಷಣ ನೀಡಲು ಕ್ರಮವಹಿಸಲಾಗುವುದು. ಮುಂದಿನ ದಿನಗಳಲ್ಲಿ ಅವೈಜ್ಞಾನಿಕ ಗಣಿಗಾರಿಕೆ ತಪ್ಪಿಸಲು ಮೈನಿಂಗ್ ಯುನಿವರ್ಸಿಟಿ ತರೆಯುವ ಚಿಂತನೆ ಮಾಡುತ್ತಿರುವುದಾಗಿ ತಿಳಿಸಿದರು.
ಇನ್ನೂ ದುರಂತದಲ್ಲಿ ಮೃತರ ಕುಟುಂಬಗಳಿಗೆ ಐದು ಲಕ್ಷ ಪರಿಹಾರವನ್ನು ಒಂದು ವಾರದ ಒಳಗೆ ನೀಡಲಾಗುವುದು. ಅದೇ ರೀತಿ ಮೃತರ ಹೆಸರಲ್ಲಿ ಯಾವುದಾದ್ರು ಪಾಲಿಸಿಗಳಿದಲ್ಲಿ ಪರಿಶೀಲಿಸಲಾಗುವುದು. ಇನ್ನೂ ಮಾಲೀಕರ ಪರಿಸ್ಥಿತಿಯನ್ನು ಗಮನಿಸಿ ಇನ್ನಿತರ ಪರಿಹಾರಗಳನ್ನು ನೀಡಲಾಗುವುದು. ಘಟನೆಗೆ ಸಂಬಂಧಿಸಿದಂತೆ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ತಿಳಿಸಿದರು.
ಸಿದ್ದರಾಮಯ್ಯನವರ ಆರೋಪದ ವಿಚಾರ ಮಾತಾನಾಡಿದ ಸಚಿವ, ದುರಂತದಲ್ಲಿ ವಿಪಕ್ಷಗಳ ಟೀಕೆಗಳು ಸಹಜ. ಆದರೆ ಟೀಕೆ ಮಾಡುವುದ ಬದಲು ಸೂಕ್ತ ಪರಿಹಾರ, ಮಾರ್ಗದರ್ಶನ ನೀಡುವಂತಾಗಲಿ ಎಂಬುದು ನಮ್ಮ ಆಶಯ ಎಂದರು.