ಚಿಕ್ಕಬಳ್ಳಾಪುರ: ಹಿರೇನಾಗವಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮಮಾವನ ಮಕ್ಕಳು ಯಾರೂ ಇಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ನಂದಿ ಬೆಟ್ಟದ ಅಭಿವೃದ್ದಿ ವಿಚಾರವಾಗಿ ಅಧಿಕಾರಿಗಳ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ಸ್ಪೋಟಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುದು ಎಂದು ತಿಳಿಸಿದರು. ಈಗಾಗಲೇ 24 ಗಂಟೆ ಒಳಗಾಗಿ ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಅಧಿಕಾರ ನಿರ್ಲಕ್ಷ್ಯದ ಆರೋಪದ ಮೇರೆಗೆ ಇಬ್ಬರು ಪೊಲೀಸರನ್ನು ಸಹ ಅಮಾನತು ಮಾಡಲಾಗಿದೆ. ತನಿಖೆಯಲ್ಲಿ ಇನ್ನಷ್ಟು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ಮೇಲೆಯೂ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
ಸದ್ಯ ರಾಜ್ಯದಲ್ಲಿ ಪೊಲೀಸರ ನಿರಂತರ ದಾಳಿಯಿಂದ ಕ್ರಷರ್ ಮಾಲೀಕರಿಗೆ ಭಯ ಶುರುವಾಗಿದೆ. ಸ್ಫೋಟ ಪ್ರಕರಣದಲ್ಲಿ ನಮ್ಮ ಮಾವನ ಮಕ್ಕಳು ಯಾರೂ ಇಲ್ಲ. ಎಲ್ಲರ ಮೇಲಿಯೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಓದಿ: ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಸುಧಾಕರ್ ಒತ್ತಾಯ