ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರಿನಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಸ್ಥಳಿಯ ಶಾಸಕರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ವಿವಿಧ ಇಲಾಖೆಯ ಪ್ರಗತಿ ಪರಿಶೀಲಿಸಲಾಯಿತು. ಅಲ್ಲದೆ ಸಿಸಿಬಿಯಿಂದ ಸ್ಯಾಂಡಲ್‌ವುಡ್ ನಟಿ ರಾಗಿಣಿ ಬಂಧನ ವಿಚಾರಕ್ಕೆ ಉತ್ತರಿಸಿದ ಸಚಿವ, ನಾನು ವೈಯಕ್ತಿಕವಾಗಿ ಯಾರ ಬಗ್ಗೆಯೂ ಮಾತನಾಡುವುದಿಲ್ಲ, ಜನಪ್ರತಿನಿಧಿಗಳು ಹಾಗೂ ನಟ-ನಟಿಯರು ರಾಯಭಾರಿಗಳಾಗಿರಬೇಕು. ಇವರನ್ನ ನೋಡಿ ಬಹಳ ಜನ ಜೀವನದಲ್ಲಿ ಬದಲಾಗ್ತಾರೆ. ನಾವೇ ಮಾದಕ ವಸ್ತುಗಳನ್ನು ಸೇವಿಸಿ ತಪ್ಪು ಸಂದೇಶ ಜನರಿಗೆ ಕೊಡಬಾರದು.
ಇದರಿಂದ ಸಮಾಜದಲ್ಲಿಗಳಿಸಿದ ಹೆಸರು ಮಣ್ಣುಪಾಲಾಗುತ್ತೆ ಎಂದರು. ಮಾದಕ ವಸ್ತುಗಳ ಸೇವನೆಯಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತೆ. ನೈಜೀರಿಯಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಇದೊಂದು ದೊಡ್ಡ ಮಾಫಿಯಾ. ಹೀಗಾಗಿ ರಾಜ್ಯದಲ್ಲಿ ಮಾದಕವಸ್ತುಗಳ ನಿಗ್ರಹಕ್ಕೆ ಕಠಿಣ ಕ್ರಮ ತಗೆದುಕೊಳ್ಳಲಾಗುವುದು.
ಇನ್ನು ತಾಲೂಕಿನ ಅಭಿವೃದ್ಧಿ ಕುರಿತು ಮಾತನಾಡಿ, ನಾನು ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ ಎಂದಿದ್ದಾರೆ. ತಾಲೂಕಿನ ಹಲವು ಇಲಾಖೆಗಳಲ್ಲಿ ಉತ್ತಮ ಅಭಿವೃದ್ಧಿ ನಡೆದಿದ್ದು ಕೆಲವು ಇಲಾಖೆಗಳಲ್ಲಿ ಇನ್ನೂ ಸಾಕಷ್ಟು ಅಭಿವೃದ್ಧಿಯಾಗಬೇಕಿದೆ. ತಾಲೂಕಿನಲ್ಲಿ ನರೇಗಾ ಕಾಮಗಾರಿಗಳ ಅಭಿವೃದ್ಧಿ, ಕುಡಿಯುವ ನೀರು, ವಸತಿ ಸೌಲಭ್ಯ, ಶಾಲೆ, ಆಸ್ಪತ್ರೆಗಳ ಅಭಿವೃದ್ಧಿ ಸೇರಿದಂತೆ ಹೆಚ್,ಎನ್ ವ್ಯಾಲಿ ನೀರು ಹಾಗೂ ಎತ್ತಿನಹೊಳೆ ಯೋಜನೆಯ ಬಗ್ಗೆ ಸಭೆಯಲ್ಲಿ ಪ್ರಸ್ಥಾಪಿಸಲಾಗಿದೆ.
ಈಗಾಗಲೇ ಇದರ ಕುರಿತು ಗೃಹಸಚಿವರ ಜೊತೆ ಮಾತನಾಡಿದ್ದೇನೆ. ಸರ್ಕಾರ ಈ ಚಟುವಟಿಕೆಗೆಳ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದರು. ಇನ್ನೂ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸ್ಥಳಿಯ ಶಾಸಕ ಶಿವಶಂಕರ್ ರೆಡ್ಡಿ, ಜಿಲ್ಲಾಧಿಕಾರಿ ಆರ್ ಲತಾ, ಸಿಇಓ ಫೌಝಿಯಾ ತರುನಮ್,ಎಸ್ಪಿ ಮಿಥುನ್ ಕುಮಾರ್ ಸೇರಿದಂತೆ ತಾಲೂಕಿನ ಅಧಿಕಾರಿಗಳು ಭಾಗಿಯಾಗಿದ್ದರು.