ETV Bharat / state

ಜನರ ರಕ್ತ ಹೀರುವವರು ನಾವಲ್ಲ, ಕಾಂಗ್ರೆಸಿಗರು: ಸಿದ್ದು ಹೇಳಿಕೆಗೆ ಸೋಮಶೇಖರ್ ಟಾಂಗ್

ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್​ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಚಾಮರಾಜನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Minister ST Somashekar reaction about siddaramaiah statement
ಸಿದ್ದರಾಮಯ್ಯ ಹೇಳಿಕೆಗೆ ಸೋಮಶೇಖರ್​ ಪ್ರತಿಕ್ರಿಯೆ
author img

By

Published : Jan 3, 2022, 7:31 AM IST

ಚಾಮರಾಜನಗರ: ಜನರ ರಕ್ತ ಹೀರಿದವರು ಕಾಂಗ್ರೆಸಿಗರು, ನಾವಲ್ಲ ಎಂದು ಆಡಳಿತ ನಡೆಸುತ್ತಿರುವವರು ರಾಕ್ಷಸರು, ರಕ್ತ ಹೀರುವವರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಎಸ್​.ಟಿ.ಸೋಮಶೇಖರ್ ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಸೋಮಶೇಖರ್​ ಪ್ರತಿಕ್ರಿಯೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಸಿಎಂ ಬೊಮ್ಮಾಯಿ ಜನಪರವಾದ ಕಾರ್ಯಕ್ರಮಗಳನ್ನು ತಂದು ಉತ್ತಮ ಆಡಳಿತ ಕೊಟ್ಟಿದ್ದಾರೆ. ಆದರೆ, ವಿರೋಧ ಪಕ್ಷದವರಾದ ಸಿದ್ದರಾಮಯ್ಯ ಮತ್ತು ಡಿಕೆಶಿಗೆ ಏನಾದರೂ ಹೇಳುವುದೊಂದು ಚಟ, ಏನಾದ್ರೂ ಹೇಳುವುದು, ಆಮೇಲೆ ಸುಮ್ಮನೆ ಕೂರುವುದು ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ಮೇಕೆದಾಟು ಯೋಜನೆ ಬಗ್ಗೆ ಕಾಂಗ್ರೆಸ್ ಪಾದಯಾತ್ರೆ ನಡೆಸಿ ರಾಜಕೀಯ ಮಾಡುತ್ತಿದೆ. ಈಗಾಗಲೇ ಯೋಜನೆ ಅನುಷ್ಠಾನಕ್ಕಾಗಿ ಸಿಎಂ ಎಲ್ಲ ಕ್ರಮ ಕೈಗೊಂಡಿದ್ದು, ತಮಿಳುನಾಡಿನ ಕ್ಯಾತೆಗೆ ಸೂಕ್ತ ಉತ್ತರ ಕೊಟ್ಟಿದ್ದಾರೆ. ಸಿದ್ದರಾಮಯ್ಯ 5 ವರ್ಷ ಆಡಳಿತ ನಡೆಸಿದಾಗ ಏನು ಮಾಡಿದರು. ಬಿಜೆಪಿ ಸರ್ಕಾರ ಏನು ಮಾಡಿದೆ ಸೇರಿದಂತೆ ಎಲ್ಲಾ ಸೂಕ್ಷ್ಮ ವಿಚಾರಗಳ ಸಂಬಂಧ ಶೀಘ್ರವೇ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದರು.

ಕೊರೊನಾ ಕಟ್ಟೆಚ್ಚರ, ಲಾಕ್​​​ಡೌನ್ ಕುರಿತು ಪ್ರತಿಕ್ರಿಯಿಸಿ, ಸದ್ಯಕ್ಕೆ ಮಹಾರಾಷ್ಟ್ರ ಗಡಿ ಮುಚ್ಚುವ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ತಜ್ಞರ ಸಲಹೆ ಮೇರೆಗೆ ನಿಯಮಗಳನ್ನು ತೆಗೆದುಕೊಳ್ಳಬೇಕು. ಸದ್ಯಕ್ಕೆ ಲಾಕ್​​ಡೌನ್ ಮಾಡುವ ಯೋಚನೆ ಇಲ್ಲ ಎಂದರು.

ಇದಕ್ಕೂ ಮುನ್ನ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಕೋವಿಡ್​​​ನಿಂದ ಕುಟುಂಬಸ್ಥರನ್ನು ಕಳೆದುಕೊಂಡ ಜಿಲ್ಲೆಯ 250ಕ್ಕೂ ಹೆಚ್ಚು ಮಂದಿಗೆ ಪರಿಹಾರ ಚೆಕ್ ಅನ್ನು ಸಚಿವರು ವಿತರಿಸಿದರು.

ಇದನ್ನೂ ಓದಿ: ಇಂದಿನಿಂದ 15-18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಪ್ರಾರಂಭ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.