ಚಿಕ್ಕಬಳ್ಳಾಪುರ: ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಚಿಕ್ಕಬಳ್ಳಾಪುರ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನೀರಿನ ಸಮಸ್ಯೆ ಸೇರಿದಂತೆ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ತಾಲೂಕಿನ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಬಗ್ಗೆ ಹಾಗೂ ಕೊಳವೆ ಬಾವಿಗಳ ಬಗ್ಗೆ ಮಾಹಿತಿ ಪಡೆದು, ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್ ಮುಖಾಂತರ ನೀರು ಪೂರೈಕೆಗೆ ಸೂಚಿಸಿದರು. ಫಸಲ್ ಬಿಮಾ ಯೋಜನೆಗೆ ಸಂಬಂಧಿಸಿದಂತೆ ಅರ್ಹ ರೈತರಿಗೆ ಆದಷ್ಟು ಬೇಗ ಪರಿಹಾರವನ್ನು ನೀಡುವುದರ ಜೊತೆಗೆ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ಮಾಡಬೇಕೆಂದು ತಿಳಿಸಿದರು.
ತಾಲೂಕು ಕೋವಿಡ್ ಕೇರ್ ಸೆಂಟರ್, ಆಸ್ಪತ್ರೆಗಳು ಮತ್ತು ತಾಲೂಕಿನ ಕೋವಿಡ್ ಸೋಂಕಿತರ ಬಗ್ಗೆಯೂ ಮಾಹಿತಿ ಪಡೆದರು. ನರೇಗಾ ಯೋಜನೆಯಡಿ ಶಾಲೆಗಳ ಅಭಿವೃದ್ಧಿ ಕಾರ್ಯಕ್ಕೆ ಯೋಜನೆ ರೂಪಿಸಲು ಈ ವೇಳೆ ಸೂಚಿಸಿದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್ ಲತಾ, ಸಿಇಓ ಪೌಝೀಯಾ ತರನುಮ್, ಎಸ್ಪಿ ಮಿಥುನ್ ಕುಮಾರ್ ಸೇರಿದಂತೆ ತಾಲೂಕಿನ ಅಧಿಕಾರಿಗಳು ಭಾಗಿಯಾಗಿದ್ದರು.