ETV Bharat / state

ರೈತರ ಹಿತಾಸಕ್ತಿಯೇ ಸರ್ಕಾರದ ಹಿತಾಸಕ್ತಿ : ಸಚಿವ ಡಾ.ಕೆ.ಸುಧಾಕರ್ - ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ

ಕೃಷಿ ಕಾಯ್ದೆ ತಿದ್ದುಪಡಿ ಉದ್ದೇಶ ರೈತರ ಆದಾಯವನ್ನು ದುಪ್ಪಟ್ಟು ಮಾಡುವುದು ಮತ್ತು ‌ದಲ್ಲಾಳಿಗಳ ಹಾವಳಿ‌ ತಪ್ಪಿಸುವುದು ಮಾತ್ರ. ಇದರಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

minister-sudhakar-meeting-in-chikkaballapura
ಡಾ.ಕೆ.ಸುಧಾಕರ್
author img

By

Published : Jan 26, 2021, 9:40 AM IST

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿ ಪ್ರತಿಭಟನೆ ಸಂಬಂಧ ರೈತ ಮುಖಂಡರ ಜೊತೆ ಸರ್ಕಾರವು ಮಾತನಾಡಿ, ಮನವೊಲಿಸಲು ಪ್ರಯತ್ನಿಸುತ್ತಿದೆ, ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಪರವಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ರೈತ ಸಂಘಟನೆ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೃಷಿ ಕಾಯ್ದೆ ತಿದ್ದುಪಡಿ ಉದ್ದೇಶ ರೈತರ ಆದಾಯವನ್ನು ದುಪ್ಪಟ್ಟು ಮಾಡುವುದು ಮತ್ತು ‌ದಲ್ಲಾಳಿಗಳ ಹಾವಳಿ‌ ತಪ್ಪಿಸುವುದು ಮಾತ್ರ. ಇದರಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ. ರೈತರ ಹಿತಾಸಕ್ತಿಯೇ ಸರ್ಕಾರದ ಹಿತಾಸಕ್ತಿಯಾಗಿದ್ದು, ದಲ್ಲಾಳಿಗಳಿಂದ ರೈತರನ್ನು ರಕ್ಷಣೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ಜಾರಿಗೊಳಿಸಿದೆ. ಕಾಯ್ದೆಯನ್ನು ವಿರೋಧಿಸಿದರೆ ದಲ್ಲಾಳಿಗಳಿಗೆ ಮಾನ್ಯತೆ ನೀಡಿದಂತೆ‌ ಆಗುತ್ತದೆ. ಹಾಗಾಗಿ ಕಾಯ್ದೆಯ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಸಹಕಾರ ನೀಡಬೇಕು ಎಂದು ರೈತ ಮುಖಂಡರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: ರಾಜ್ಯದಲ್ಲಿ ರೈತರ ಟ್ರ್ಯಾಕ್ಟರ್ ರ‍್ಯಾಲಿಗೆ ಅವಕಾಶ ನೀಡದ ಸರ್ಕಾರದ ಕ್ರಮಕ್ಕೆ ಕಾಂಗ್ರೆಸ್ ನಾಯಕರ ಆಕ್ರೋಶ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ, ಪ್ರತಿಭಟನೆ ಸಹಜವಾಗಿದ್ದು, ಹೋರಾಟವನ್ನು ಹತ್ತಿಕ್ಕಲು, ಮಟ್ಟಹಾಕಲು ನಾನು ಬಂದಿಲ್ಲ. ಬದಲಿಗೆ ರೈತರ ಮನವೊಲಿಸಲು ಬಂದಿರುವುದಾಗಿ ಸಚಿವರು ತಿಳಿಸಿದರಲ್ಲದೇ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಭಟನಾ ನಿರತ ರೈತರೊಂದಿಗೆ ಹಲವು ಸುತ್ತಿನ ಸಭೆಗಳನ್ನು ಮಾಡಿ ಮಾತುಕತೆ ನಡೆಸಿದ್ದಾರೆ. ರೈತರ ಹಲವು ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.