ಚಿಕ್ಕಬಳ್ಳಾಪುರ: ಡಿಸಿಸಿ ಬ್ಯಾಂಕ್ನಲ್ಲಿ ಬ್ರಹ್ಮಾಂಡ ಭ್ರಷ್ಟಚಾರ ನಡೆದಿದ್ದು, ಇದರ ಬಗ್ಗೆ ಸರ್ಕಾರ ತನಿಖೆ ನಡೆಸಿದೆ. ಇದರ ಸತ್ಯಾಸತ್ಯತೆ ಹೊರಬರಲಿದೆ. ನಂತರ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಕೋಚಿಮುಲ್ ವಿಭಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವ ಹಿನ್ನೆಲೆ ನಗರದಲ್ಲಿ ಸಚಿವರು ಹಾಗೂ ಸಿಎಂ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಜನತೆ ಹಾಗೂ ರೈತರು ಸಂಭ್ರಮಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷಗಳಾಗಿದೆ. ಸಚಿವ ಸಂಪುಟದಲ್ಲಿ ಕೋಚಿಮುಲ್ ವಿಭಜನೆಗೆ ಅನುಮೋದನೆ ಸಿಕ್ಕಿದೆ. ಆದರೆ, ಈಗ ಚಕಾರ ಎತ್ತುತ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಕಿಡಿಕಾರಿದರು.
ಕೆಲವರು ಶಕುನಿ ಬುದ್ದಿಯನ್ನು ತೋರುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಶಕುನಿ ಬುದ್ದಿಯನ್ನು ಹೊಂದಿರುವ ಶಾಸಕ ಶಿವಶಂಕರ್ ರೆಡ್ಡಿ ತಕರಾರು ಮಾಡುತ್ತಿದ್ದಾರೆ. ಅವರು ಸಚಿವರಿದ್ದಾಗ ವಿಭಜನೆಗೆ ಅನುಮೋದನೆ ನೀಡಿದ್ರು. ಈಗ ಬೇಡ ಎನ್ನುತ್ತಿದ್ದಾರೆ ಎಂದರು.
ಡಿಸಿಸಿ ಬ್ಯಾಂಕ್ನಲ್ಲಿ ಸಾಕಷ್ಟು ಭ್ರಷ್ಟಚಾರ ನಡೆದಿದೆ. ಇದರ ಬಗ್ಗೆ ತನಿಖೆ ನಡೆದಿದೆ. ನನಗೆ ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರ ತನಿಖೆ ನಡೆಸಿ ಶಿಕ್ಷೆ ನೀಡಲಿದೆ. ಕಾನೂನು ಬಳಿ ಹೋಗಿ ತನಿಖೆಗೆ ಸ್ಟೇ ತರುತ್ತಿದ್ದಾರೆ. ಇದರಿಂದ ಭ್ರಷ್ಟಚಾರ ಎಷ್ಟು ನಡೆದಿದೆ ಎಂಬುದು ಗೊತ್ತಾಗಲಿದೆ. ಇದರಲ್ಲಿ 100ಕ್ಕೆ 100ರಷ್ಟು ರಮೇಶ್ ಕುಮಾರ್ ಭಾಗಿಯಾಗಿದ್ದಾರೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆ ರಚನೆಯಾಗಿ 15 ವರ್ಷಗಳಾದ್ರು ಪ್ರತ್ಯೇಕ ಹಾಲು ಒಕ್ಕೂಟ ಅಸ್ಥಿತ್ವಕ್ಕೆ ಬಂದಿರಲಿಲ್ಲ. ಇದು ಸಚಿವ ಸುಧಾಕರ್ ಹಾಗೂ ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ನಡುವೆ ರಾಜಕೀಯ ವಾಗ್ವಾದಕ್ಕೆ ತಿರುಗಿತ್ತು.
ಓದಿ: ಜಿಟಿಡಿ ಉಳಿಸಿಕೊಳ್ಳಲು ಹೆಚ್‌ಡಿಡಿ, ಹೆಚ್ಡಿಕೆ ಯತ್ನ: ಸಿದ್ದರಾಮಯ್ಯ